KARNATAKA
“ಅಂದು ಕಾಂಗ್ರೆಸ್ ಮುಕ್ತ ಕರ್ನಾಟಕ ಎಂದೆವು- ಇಂದು ಅದೇ ಪರಿಸ್ಥಿತಿ ನಮ್ಮ ಬಿಜೆಪಿಗೆ ಬಂದಿದೆ “…!
ಬಿಜೆಪಿಯಲ್ಲಿ ಬೆಳೆಯುವವರನ್ನು ಕತ್ತರಿಸುತ್ತಾರೆ. ಬಕೆಟ್ ಹಿಡಿಯುವವರನ್ನು ಮೇಲೆತ್ತುತ್ತಾರೆ ಎಂದು ಮಾಜಿ ಸಚಿವ, ಬಿಜೆಪಿ ನಾಯಕ ಎಂಪಿ ರೇಣುಕಾಚಾರ್ಯ ಸ್ವಪಕ್ಷೀಯರ ವಿರುದ್ಧವೇ ಕಿಡಿಕಾರಿದ್ದಾರೆ.
ದಾವಣಗೆರೆ: ಹಿಂದೆ ನಾವೆಲ್ಲಾ ಕಾಂಗ್ರೆಸ್ ಮುಕ್ತ ಕರ್ನಾಟಕ ಮಾಡುತ್ತೇವೆಂದು ಹೇಳುತ್ತಿದ್ದೆವು. ಆದ್ರೆ ಇಂದು ಆ ಪರಿಸ್ಥಿತಿ ನಮಗೆ ಬಂದಿದೆ.
ದಾವಣಗೆರೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ರೇಣುಕಾಚಾರ್ಯ ಬಿಜೆಪಿಯ ಹಳೆಯ ದಿನಗಳನ್ನು ಮೆಲುಕು ಹಾಕಿದ್ದಾರೆ.
ಅಂದು ನಾವು ಕಾಂಗ್ರೆಸ್ ಮುಕ್ತ ಕರ್ನಾಟಕ ಮಾಡುತ್ತೇವೆಂದು ಹೇಳುತ್ತಿದ್ದೆವು, ಆದರೇ ಆ ಪರಿಸ್ಥಿತಿ ಇಂದು ನಮಗೆ ಬಂದಿದೆ ಎಂದು ಬೇಸರವ್ಯಕ್ತಪಡಿಸಿದ್ದಾರೆ.
ನಾನು ಕಾಂಗ್ರೆಸ್ ಸೇರುತ್ತೇನೆ ಎಂದು ಅಪಪ್ರಚಾರ” ನಾನು ಬಿಜೆಪಿ ಬಿಡುತ್ತೇನೆಂದು ಎಲ್ಲೂ ಹೇಳಿಲ್ಲ,
ಬಿಜೆಪಿ ಪಾರ್ಟಿಯಿಂದ ರೇಣುಕಾಚಾರ್ಯ ಕಾಂಗ್ರೆಸ್ ಸೇರುತ್ತಿದ್ದಾರೆಂದು ಅಪಪ್ರಚಾರ ಮಾಡಲಾಗುತ್ತಿದೆ.
ನಾನು ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರುತ್ತೇನೆಂದು ಎಲ್ಲೂ ಹೇಳಿಲ್ಲ.
ನಾನು ಕ್ಷೇತ್ರದ ಸಮಸ್ಯೆಗಾಗಿ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿದರೆ ಏನು ತಪ್ಪು? ಎಂದು ಹೊನ್ನಾಳಿಯ ಮಾಜಿ ಶಾಸಕ ರೇಣುಕಾಚಾರ್ಯ ಪ್ರಶ್ನಿಸಿದ್ದಾರೆ.
ರಾಜ್ಯದ ಬಿಜೆಪಿ ಅಧ್ಯಕ್ಷರ ಅವಧಿ ಮುಗಿದರೂ ಇನ್ನೂ ರಾಜ್ಯಾಧ್ಯಕ್ಷರ ನೇಮಕ ಮಾಡಿಲ್ಲ.
ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿಲ್ಲ.
ಇದರಿಂದ ಯಡಿಯೂರಪ್ಪನವರ ಮನಸ್ಸಿಗೆ ಬಹಳ ನೋವುಂಟಾಗಿದೆ.
ಕೆಲವರು ಪತ್ರಿಕಾ ಹೇಳಿಕೆ ನೀಡುವ ಹುಲಿಗಳಾಗಿದ್ದಾರೆ ಪಕ್ಷ ನನಗೆ ತಾಯಿ ಸಮಾನ, ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ ಎಂದು ಗುಡುಗಿದರು.
ಕೆಲ ಬಿಜೆಪಿ ನಾಯಕರಿಂದ ನನ್ನ ಮನಸ್ಸಿಗೆ ನೋವಾಗಿದೆ. ಕೆಲ ನಾಯಕರ ನಡೆಯಿಂದ ನನ್ನ ಮನಸ್ಸಿಗೆ ನೋವುಂಟಾಗಿದೆ ಅದನ್ನು ಖಂಡಿಸುತ್ತೇನೆ.
ಯಡಿಯೂರಪ್ಪನವರನ್ನು ಕಡೆಗಣಿಸಿದ್ದೇ ಪಕ್ಷಕ್ಕೆ ಶಾಪವಾಗಿದೆ.
ರೇಣುಕಾಚಾರ್ಯ ಬೆಳೆಯುತ್ತಾನೆಂದು ತುಳಿಯುವ ಕೆಲಸ ಮಾಡಿದರು.
ನಾನು ಮಾತಾಡಿದ ತಕ್ಷಣ ರೇಣುಕಾಚಾರ್ಯ ಪಕ್ಷ ಬಿಡುತ್ತಾನೆಂದು ಹೇಳುತ್ತಿದ್ದಾರೆ.
ಯಾರು ರಾಜಕೀಯವಾಗಿ ಬೆಳೆಯುತ್ತಾರೋ ಅವರನ್ನು ಕತ್ತರಿಸುತ್ತಾರೆ, ಯಾರು ಬಕೆಟ್ ಹಿಡಿಯುತ್ತಾರೋ ಅವರನ್ನು ಬೆಳೆಸುತ್ತಾರೆ ಎಂದು ಸ್ವ ಪಕ್ಷಿಯರ ವಿರುದ್ದವೇ ಗುಡುಗಿದರು.