ಬೆಂಗಳೂರು, ಮಾರ್ಚ್ 19: ಈ ವರ್ಷದ ಎಸ್ ಎಸ್ ಎಲ್ ಸಿ ಪರೀಕ್ಷೆ-1 ಮಾರ್ಚ್ 18ಕ್ಕೆ ಆರಂಭವಾಗಿ ಏಪ್ರಿಲ್ 2ರ ವರೆಗೆ ನಡೆಯಲಿದೆ. ಲಕ್ಷಾಂತರ ವಿದ್ಯಾರ್ಥಿಗಳು ಪರೀಕ್ಷೆಗೆ ಬರೆಯುತ್ತಿದ್ದಾರೆ.
ಪರೀಕ್ಷೆಗೆ ಹೋಗುವ ವಿದ್ಯಾರ್ಥಿಗಳಿಗೆ ಪ್ರಯಾಣ ಸುಗಮವಾಗಲು ಕೆಎಸ್ಆರ್ಟಿಸಿ ಉಚಿತ ಪ್ರಯಾಣ ಘೋಷಿಸಿದ್ದು, ಹಾಲ್ ಟಿಕೆಟ್ ತೋರಿಸಿ ಉಚಿತವಾಗಿ ಬಸ್ನಲ್ಲಿ ಪ್ರಯಾಣಿಸಬಹುದು. ಗ್ರಾಮೀಣ ಭಾಗದ ಮಕ್ಕಳಿಗೆ ವಿಶೇಷವಾಗಿ ಸಂಚಾರಕ್ಕೆ ಸುಗಮವಾಗಲು ಸರ್ಕಾರ ಕ್ರಮ ಕೈಗೊಂಡಿದೆ.