LATEST NEWS
ಪಾಕ್ ಪರ ಘೋಷಣೆ ಕೂಗಿದ್ದಕ್ಕೆ ಯಾವುದೇ ಸಾಕ್ಷಿ ಸಿಕ್ಕಿಲ್ಲ- ಪೋಲಿಸ್ ಕಮಿಷನರ್ ಅನುಪಮ್ ಅಗರ್ವಾಲ್

ಮಂಗಳೂರು ಮೇ 01: ಮಂಗಳೂರಿನ ಕುಡುಪು ಬಳಿ ನಡೆದ ಗುಂಪು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ವ್ಯಕ್ತಿ ಪಾಕ್ ಪರ ಘೋಷಣೆ ಕೂಗಿದ್ದರ ಬಗ್ಗೆ ಯಾವುದೇ ಸಾಕ್ಷಿಯಿಲ್ಲ ಎಂದು ಮಂಗಳೂರು ಪೋಲಿಸ್ ಕಮಿಷನರ್ ಅನುಪಮ್ ಅಗರ್ವಾಲ್ ಹೇಳಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಅವರು ಕುಡುಪು ಗುಂಪು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯದಲ್ಲಿ ನಿರ್ಲಕ್ಷ ತೋರಿದ ಮೂವರು ಪೋಲಿಸರನ್ನು ಅಮಾನತು ಮಾಡಲಾಗಿದೆ. ಸ್ಥಳೀಯ ಪೊಲೀಸರು ಮೊದಲು ಅಸಹಜ ಸಾವು ಎಂದು ಪ್ರಕರಣ ದಾಖಲು ಮಾಡಿದ್ದರು. ತನಿಖೆ ನಡೆಸಿದ ನಂತರ ಇದು ಕೊಲೆ ಎಂದು ಧೃಡಪಟ್ಟಿದೆ. ಮೂವರು ಪೋಲಿಸರನ್ನು ಕರ್ತವ್ಯದಲ್ಲಿ ಲೋಪದ ಆರೋಪದಡಿಯಲ್ಲಿ ಅಮಾನತು ಮಾಡಲಾಗಿದೆ. ಮಂಗಳೂರು ಗ್ರಾಮಾಂತರ ಠಾಣೆ ಇನ್ಸ್ ಪೆಕ್ಟರ್ ಶಿವಕುಮಾರ್ , ಹೆಡ್ ಕಾನ್ಸ್ ಟೇಬಲ್ ಚಂದ್ರ.ಪಿ , ಕಾನ್ಸಟೇಬಲ್ ಯಲ್ಲಾಲಿಂಗ ಮೂವರನ್ನು ಅಮಾನತು ಮಾಡಲಾಗಿದೆ. ಪ್ರಕರಣದ ಬಗ್ಗೆ ತನಿಖೆಯನ್ನು ಮುಂದುವರೆಸುತ್ತಿದ್ದೇವೆ, ಈಗಾಗಲೇ 23 ಮಂದಿಯನ್ನು ಬಂಧಿಸಲಾಗಿದೆ. ತಲೆಮರೆಸಿಕೊಂಡಿರುವರಿಗೆ ಹುಡುಕಾಟ ಮಾಡುತ್ತಿದ್ದೇವೆ , ಘಟನ ಸ್ಥಳದಲ್ಲಿ ಇದ್ದ 15 ಜನರಿಗೆ ನೋಟಿಸ್ ಜಾರಿ ಮಾಡಿದ್ದೇವೆ ಎಂದರು.
