Connect with us

KARNATAKA

ಗ್ಯಾರಂಟಿ ಕಾರ್ಡ್ ವಿತರಣೆ ಮಾಡುತ್ತಿದ್ದಾರೆ..ಆದ್ರೆ ಕಾಂಗ್ರೆಸ್​ಗೆ ವಾರೆಂಟಿ ಅವಧಿ ಮುಗಿದಿದೆ; ಸಿಟಿ ರವಿ

ವಿಜಯಪುರ, ಮಾರ್ಚ್ 13: ರಾಜ್ಯದಲ್ಲಿ ಕಾಂಗ್ರೆಸ್ ನಾಯಕರು ಗ್ಯಾರಂಟಿ ಕಾರ್ಡ್ ವಿತರಣೆ ಮಾಡುತ್ತಿದ್ದಾರೆ. ಆದರೆ ಕಾಂಗ್ರೆಸ್ ಪಕ್ಷಕ್ಕೆ ದೇಶದಲ್ಲಿ ವಾರೆಂಟಿ ಅವಧಿ ಮುಗಿದಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ವಾಗ್ದಾಳಿ ಮಾಡಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಾರಂಟಿ ಕಾರ್ಡ್ ನೀಡಿ ಏನು ಪ್ರಯೋಜನವಾಗುತ್ತದೆ. ಕಾಂಗ್ರೆಸ್ ಗ್ಯಾರಂಟಿ ಅನ್ನೋದು ಒಂದು ಫಾಲ್ಸ್ ಕಾರ್ಡ್ ಆಗಿದೆ. ಈ ಫಾಲ್ಸ್ ಕಾರ್ಡ್ ಬದಲಾಗಿ ನಾವು ಜನರಿಗೆ ಅಭಿವೃದ್ಧಿ ಕಾರ್ಡ್(ರಿಪೋರ್ಟ್ ಕಾರ್ಡ್) ನೀಡುತ್ತೇವೆ ಎಂದು ಟೀಕಿಸಿದ್ದಾರೆ.

ಮಂಡ್ಯದಲ್ಲಿ ಉರಿಗೌಡ ನಂಜೆಗೌಡ ಮಹಾದ್ವಾರ ತೆರವು ಮಾಡಿದ ವಿಚಾರವಾಗಿ ಮಾತನಾಡಿ,ಮಹಾದ್ವಾರ ತೆರವು ಮಾಡಿದ್ದು, ಅಕ್ಷಮ್ಯ ಅಪರಾದವಾಗಿದೆ. ದ್ವಾರ ಹಾಕಿದ್ದು ಸರಿಯಾಗಿದೆ. ಆದರೆ ತೆರವು ಮಾಡಿದ್ದು ಯಾಕೆ ಗೊತ್ತಿಲ್ಲ. ಮುಂದಿನ ದಿನಗಳಲ್ಲಿ ಶಾಶ್ವತ ದ್ವಾರ ನಿರ್ಮಾಣ ಮಾಡಲಾಗುವುದು ಎಂದು ಹೇಳಿದ್ದಾರೆ.

ಈ ಹಿಂದೆ ಕರೆ ತುಂಬುವ ಯೋಜನೆಯನ್ನು ನಿಮ್ಮದೆ ಸರ್ಕಾರ ತಿರಸ್ಕಾರ ಮಾಡಿತ್ತು. ಬಿಜೆಪಿ ಸರ್ಕಾರ ಕೆರೆ ತುಂಬುವ ಯೋಜನೆಯನ್ನು ಜಾರಿಗೆ ತಂದಿದೆ. ಮಲ್ಲಿಕಾರ್ಜುನ ಖರ್ಗೆ ನೀರಾವರಿ ಸಚಿವರಾಗಿದ್ದಾಗ ಕೆರೆ ತುಂಬುವ ಯೋಜನೆಗೆ ಅನುಮತಿ ನೀಡಿರಲಿಲ್ಲ. ಇದೀಗ ನೀವು ಅದೇ ಯೋಜನೆಯ ಹೆಸರಿನಲ್ಲಿ ಫೋಟೋ ಹಾಕಿಕೊಳ್ಳುತ್ತಿರಿ ಎಂದು ಮಾಜಿ ಸಚಿವ ಎಂಬಿ ಪಾಟೀಲ್ ವಿರುದ್ಧ ವಾಗ್ದಾಳಿ ನಡೆಸಿದ ಸಿಟಿ ರವಿ ಕಿಡಿಕಾರಿದ್ದಾರೆ.

Share Information
Advertisement
Click to comment

You must be logged in to post a comment Login

Leave a Reply