DAKSHINA KANNADA
ಅವರು ನಮಗೆ ಆರೋಪಿಗಳಷ್ಟೇ, ಅವರು ಯಾವ ಸಂಘಟನೆ ಅನ್ನೋದು ನಮಗೆ ಬೇಡ: ಪೊಲೀಸ್ ಕಮಿಷನರ್ ಕುಲದೀಪ್ ಜೈನ್
ಮಂಗಳೂರು, ಜುಲೈ 21: ಮಂಗಳೂರಿನ ಮೂವರು ಭಜರಂಗದಳ ಕಾರ್ಯಕರ್ತರಿಗೆ ಗಡೀಪಾರು ನೋಟೀಸ್ ವಿಚಾರವಾಗಿ ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಹೇಳಿಕೆ ನೀಡಿದ್ದಾರೆ.
ನಮ್ಮ ನಗರದಲ್ಲಿ ಪದೇ ಪದೇ ಕ್ರೈಂನಲ್ಲಿ ಭಾಗಿಯಾದವರ ಮೇಲೆ ಕ್ರಮ ಆಗಿದೆ, ಮತ್ತೆ ಮತ್ತೆ ಕ್ರೈಂ ಮಾಡಿದವರ ಮೇಲೆ ಕ್ರಮ ತೆಗೆದುಕೊಳ್ಳುವ ಕೆಲಸ ಆಗ್ತಿದೆ. ಅವರು ನಮಗೆ ಆರೋಪಿಗಳಷ್ಟೇ, ಅವರು ಯಾವ ಸಂಘಟನೆ ಅನ್ನೋದು ನಮಗೆ ಬೇಡ. ಮೂವರು ಮಾತ್ರ ಅಲ್ಲ, ಅದಕ್ಕೂ ಹೆಚ್ಚು ಜನರಿಗೆ ನೋಟೀಸ್ ಮಾಡಲಾಗಿದೆ.
ನೈತಿಕ ಪೊಲೀಸ್ ಗಿರಿ ಸಂಬಂಧಿಸಿ ಮೂವರ ಮೇಲೆ ಠಾಣೆಯಿಂದ ಪ್ರಸ್ತಾವನೆ ಬಂದಿದೆ. ಅವರನ್ನ ಗಡೀಪಾರು ಮಾಡಲು ಠಾಣಾಧಿಕಾರಿಗಳು ಪ್ರಸ್ತಾವನೆ ಸಲ್ಲಿಸಿದ್ದರು, ಹೀಗಾಗಿ ಅವರಿಗೆ ನೋಟೀಸ್ ಮಾಡಿದ್ದೇವೆ, ಗಡಿಪಾರು ಪ್ರಕ್ರಿಯೆ ಆಗಲಿದೆ.
ರೌಡಿ ಶೀಟ್ ತೆರೆಯೋದು ಅಥವಾ ಗೂಂಡಾ ಕಾಯ್ದೆ ಹಾಕುವ ಕೆಲಸವೂ ಆಗ್ತಿದೆ. ನಿರಂತರ ಸಮಾಜ ವಿರೋಧಿ ಚಟುವಟಿಕೆಗಳನ್ನು ನಡೆಸೋರನ್ನ ಗುರುತಿಸಿದ್ದೇವೆ ಎಂದು ಮಂಗಳೂರು ನಗರ ಪೊಲೀಸ್ ಕಮೀಷನರ್ ಕುಲದೀಪ್ ಜೈನ್ ಹೇಳಿದ್ದಾರೆ.