UDUPI
ನಿಲ್ಲಿಸಿದ ಕಾರಿನಿಂದ ಹಣ ಎಗರಿಸಿದ ಕಳ್ಳನ ಬಂಧಿಸಿದ ಪೊಲೀಸರು

ಉಡುಪಿ ಜುಲೈ 30: ಮಂಗಳೂರಿನ ಕ್ಲಾಕ್ ಟವರ್ ಬಳಿ ನಿಲ್ಲಿಸಿದ ಕಾರಿನಿಂದ 2 ಲಕ್ಷ ಹಣ ಎಗರಿಸಿದ ಕಳ್ಳನನ್ನು ಬಂಧಿಸುವಲ್ಲಿ ಉಡುಪಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಮೂಡಬಿದ್ರೆ ನಿವಾಸಿ ಗುರುಪ್ರಸಾದ್ ಎಂದು ಗುರುತಿಸಲಾಗಿದೆ. ಈತ ಮಂಗಳೂರಿನ ಕ್ಲಾಕ್ ಟವರ್ ಬಳಿ ನಿಲ್ಲಿಸಿದ್ದ ಕ್ರೇಟಾ ಕಾರಿನಿಂದ 2,03,700 ರೂಪಾಯಿ ಹಣವನ್ನು ಕಳವು ಮಾಡಿದ್ದು ಈ ಕುರಿತಂತೆ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಖಚಿತ ಮಾಹಿತಿ ಮೆರೆಗೆ ಕಾರ್ಯಾಚರಣೆ ನಡೆಸಿದ ಉಡುಪಿ ಡಿಸಿಐಬಿ ಪೊಲೀಸರು ಉಡುಪಿ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತನಿಂದ ಕಳವು ಮಾಡಿದ್ದ 2,03,700 ಹಣ ಹಾಗೂ ಕಳವು ಮಾಡಿದ್ದ ಹಣದಲ್ಲಿ ಖರೀದಿಸಿದ್ದ ಮೊಬೈಲ್ ಫೋನ್ ವಶಕ್ಕೆ ಪಡೆಯಲಾಗಿದೆ. ಆರೋಪಿ ಮೇಲೆ 2015ನೇ ಇಸವಿಯಲ್ಲಿ ಶಿರ್ವಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮನೆಯಲ್ಲಿ ಕಳ್ಳತನ ಮಾಡಿದ್ದ ಪ್ರಕರಣ ದಾಖಲಾಗಿದ್ದು, ಈ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ.
