Connect with us

    KARNATAKA

    ನೀರು ಕೇಳುವ ನೆಪದಲ್ಲಿ ಮಾಜಿ ಸಂಸದರ ಪತ್ನಿಯ ಕುತ್ತಿಗೆಯಲ್ಲಿದ್ದ ಬಂಗಾರದ ಸರ ಅಪಹರಿಸಿ ಕಳ್ಳ ಪರಾರಿ..!

    ಅಪರಿಚಿತ ವ್ಯಕ್ತಿಯೊಬ್ಬ ನೀರು ಕೇಳಲು ನೆಪದಲ್ಲಿ, ಮಾಜಿ ಸಂಸದರ ಪತ್ನಿಯ ಬಂಗಾರದ ಸರವನ್ನು ಅಪಹರಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ನಗರದ ಯಲ್ಲಾಪುರ ನಾಕಾದಲ್ಲಿ ನಡೆದಿದೆ.

    ಶಿರಸಿ: ಅಪರಿಚಿತ ವ್ಯಕ್ತಿಯೊಬ್ಬ ನೀರು ಕೇಳಲು ನೆಪದಲ್ಲಿ, ಮಾಜಿ ಸಂಸದರ ಪತ್ನಿಯ ಬಂಗಾರದ ಸರವನ್ನು ಅಪಹರಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ನಗರದ ಯಲ್ಲಾಪುರ ನಾಕಾದಲ್ಲಿ ನಡೆದಿದೆ.

    ಮಾಜಿ ಸಂಸದ ದೇವರಾಯ ನಾಯ್ಕ ಅವರ ಮನೆಯಲ್ಲಿ ಈ ಘಟನೆ ನಡೆದಿದೆ.

    ಮಾಜಿ ಸಂಸದರ ಪತ್ನಿ ಗೀತಾ ನಾಯ್ಕ ಒಬ್ಬರೇ ಇದ್ದಾಗ ಅಪರಿಚಿತ ವ್ಯಕ್ತಿಯೊಬ್ಬ ನೀರು ಕೇಳುವ ನೆಪ ಮಾಡಿಕೊಂಡು ಬಂದಿದ್ದ ಈ ವೇಳೆ ಅವರ ಕುತ್ತಿಗೆಯಲ್ಲಿದ್ದ ಬಂಗಾರದ ಸರ ಕಿತ್ತು ಪರಾರಿಯಾಗಿದ್ದಾನೆ.

    ಅಂದಾಜು 3 ಲಕ್ಷ ರೂ. ಮೌಲ್ಯದ 60 ಗ್ರಾಂ ತೂಕದ ಸರವಾಗಿದೆ.

    ಈ ವಿಷಯವನ್ನ ಅವರ ಮಗನಿಗೆ ತಿಳಿಸಿದಾಗ ವೈದ್ಯರಾಗಿರುವ ಅವರ ಮಗ ನಾಗರಾಜ ನಾಯ್ಕ ಸ್ಥಳಕ್ಕೆ ಆಗಮಿಸಿ, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

    ಶಿರಸಿ ಮಾರುಕಟ್ಟೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply