Connect with us

    KARNATAKA

    SBI ಬ್ಯಾಂಕ್‍ನಲ್ಲಿದ್ದ 13 ಕೋಟಿ ಮೌಲ್ಯದ ಚಿನ್ನಾಭರಣಕ್ಕೆ ಕಳ್ಳರ ಕನ್ನ..! 

    ದಾವಣಗೆರೆ: ಸ್ಟೇಟ್ ಬ್ಯಾಂಕ್ ಆಫ್‌ ಇಂಡಿಯಾ (SBI) ನ್ಯಾಮತಿ ಶಾಖೆಯ ಲಾಕರ್‌ನಲ್ಲಿದ್ದ ಕೋಟ್ಯಾಂತರ ಮೌಲ್ಯದ ಚಿನ್ನಾಭರಣ ಕಳ್ಳರ ಮಾಲಾಗಿದೆ. ಸುಮಾರು 12.95 ಕೋಟಿ ರೂ. ಮೌಲ್ಯದ 17.705 ಕೆಜಿ ಚಿನ್ನಾಭರಣವನ್ನು ಕಳ್ಳರು ಹೊತ್ತೊಯ್ದಿದ್ದಾರೆ.

    ಈ ಬಗ್ಗೆ ಬ್ಯಾಂಕ್ ಮ್ಯಾನೇಜರ್ ಸುನೀಲ್ ಕುಮಾರ್ ಯಾದವ್  ಪೊಲೀಸರಿಗೆ ದೂರು ನೀಡಿದ್ದಾರೆ. ನೆಹರು ರಸ್ತೆಯಲ್ಲಿರುವ ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾ (State Bank of India) ಶಾಖೆಯ ಕಿಟಕಿ ಸರಳುಗಳನ್ನು ಮುರಿದು ಲಾಕರ್‌ನಲ್ಲಿದ್ದ ನಗದು ಹಾಗೂ ಚಿನ್ನಾಭರಣವನ್ನು ಕಳ್ಳರು ಹೊತ್ತೊಯ್ದಿದ್ದಾರೆ. ಶನಿವಾರ ಹಾಗೂ ಭಾನುವಾರ ಎರಡು ದಿನ ಬ್ಯಾಂಕ್ ರಜೆ ಇದ್ದ ಕಾರಣ ಶುಕ್ರವಾರ ರಾತ್ರಿ ಕಳ್ಳರು ಈ ಕೃತ್ಯ ಎಸಗಿರುವ ಬಗ್ಗೆ ನ್ಯಾಮತಿ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಕಳ್ಳರು ಗುರುತು ಪತ್ತೆಯಾಗದಂತೆ ಸಿಸಿಟಿವಿ ಕ್ಯಾಮೆರಾದ ಡಿವಿಆರ್ ಸಮೇತ ಪರಾರಿಯಾಗಿದ್ದಾರೆ. ಅಲ್ಲದೇ ಶ್ವಾನದಳದ ಶ್ವಾನಗಳಿಗೆ ವಾಸನೆ ಗ್ರಹಿಸಲು ಸಾಧ್ಯವಾಗದಂತೆ ಬ್ಯಾಂಕ್‌ನ ಒಳಗಡೆ ಖಾರದ ಪುಡಿ ಎರಚಿದ್ದಾರೆ. ಕಳ್ಳರನ್ನು ಹಿಡಿಯಲು ಎಎಸ್ಪಿ ಸ್ಯಾಮ್ ವರ್ಗೀಸ್ ನೇತೃತ್ವದಲ್ಲಿ ತಂಡ ರಚನೆ ಮಾಡಲಾಗಿದೆ.

     

    Share Information
    Advertisement
    Click to comment

    You must be logged in to post a comment Login

    Leave a Reply