DAKSHINA KANNADA
ಕಾಂಗ್ರೆಸ್ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ: ದಕ್ಷಿಣ ಕನ್ನಡಕ್ಕೆ ಪದ್ಮರಾಜ್, ಉಡುಪಿಗೆ ಜಯಪ್ರಕಾಶ್ ಹೆಗ್ಡೆ

ಬೆಂಗಳೂರು,ಮಾರ್ಚ್ 21: ಲೋಕಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಕರ್ನಾಟಕ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಮೂರನೇ ಪಟ್ಟಿಯಲ್ಲಿ ಒಟ್ಟು 17 ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್ ಘೋಷಿಸಿದೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಕ್ಯಾಪ್ಟನ್ ಬ್ರಿಜೇಶ್ ಚೌಟಾ ವಿರುದ್ದ ಪದ್ಮರಾಜ್ ಅವರಿಗೆ ಹಾಗು ಉಡುಪಿ, ಚಿಕ್ಕಮಗಳೂರು ಕ್ಷೇತ್ರ- ಜಯಪ್ರಕಾಶ್ ಹೆಗ್ಡೆ ಟಿಕೆಟ್ ನೀಡಿದೆ.

ಮೈಸೂರು-ಕೊಡಗು ಕ್ಷೇತ್ರದಿಂದ ರಾಜವಂಶಸ್ಥ ಯದುವೀರ್ ವಿರುದ್ಧ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ. ಇತ್ತ ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಪ್ರೊ. ಎಂ.ವಿ.ರಾಜೀವ್ ಗೌಡ ಅವರನ್ನು ಪೈಪೋಟಿಗೆ ಇಳಿಸಿದೆ.