DAKSHINA KANNADA
ಪೊಲೀಸರ ಮನಸ್ಥಿತಿ ಯಾವ ರೀತಿ ಇದೆ ಎಂಬುದರ ಸ್ಯಾಂಪಲ್ ಇದು: ಹರೀಶ್ ಪೂಂಜಾ

ಪುತ್ತೂರು, ಮೇ 18: ಪುತ್ತೂರಿನಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರ ದೌರ್ಜನ್ಯದಿಂದ ಗಂಭೀರ ಗಾಯಗೊಂಡಿರುವ ಹಿಂದೂ ಸಂಘಟನೆ ಕಾರ್ಯಕರ್ತರು ಆಸ್ಪತ್ರೆಗೆ ದಾಖಲಾಗಿದ್ದು, ಗಾಯಾಳುಗಳನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿಚಾರಿಸಿ ಬಳಿಕ ಪೊಲೀಸರ ಈ ಅಮಾನವೀಯ ಕೃತ್ಯವನ್ನ ಖಂಡಿಸ್ತೇನೆ ಎಂದಿದ್ದಾರೆ.
ಮಾಧ್ಯಮದ ಜೊತೆ ಮಾತನಾಡಿದ ಶಾಸಕ ಹರೀಶ್ ಪೂಂಜಾ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಪೊಲೀಸರ ಮನಸ್ಥಿತಿ ಯಾವ ರೀತಿ ಇದೆ ಅಂತ ಎಂಬುದನ್ನ ಸ್ಯಾಂಪಲ್ ರೀತಿಯಲ್ಲಿ ತೋರಿಸಿದ್ದಾರೆ. ಹಿಂದೂ ಕಾರ್ಯಕರ್ತರ ಮೇಲೆ ಇಂತಹ ದೌರ್ಜನ್ಯ ನಡೆಯುವಾಗ ಓರ್ವ ಶಾಸಕನಾಗಿ ಅದರ ವಿರುದ್ಧ ಹೋರಾಟ ಮಾಡುತ್ತೇನೆ.

ಈ ಬಗ್ಗೆ ಈಗಾಗ್ಲೇ ದ.ಕ. ಜಿಲ್ಲಾ ಎಸ್ಪಿಗೆ ಘಟನೆ ಬಗ್ಗೆ ಕ್ರಮ ಕೈಗೊಳ್ಳುಂತೆ ಒತ್ತಾಯಿಸಿದ್ದೇನೆ. ಯಾವ ಪೊಲೀಸರು ಹಿಂದೂ ಕಾರ್ಯಕರ್ತರ ಮೇಲೆ ಈ ರೀತಿ ದೌರ್ಜನ್ಯ ಮಾಡಿದ್ದಾರೋ ಅವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಿ, ಇಂದು ಸಂಜೆಯೊಳಗೆ ಕ್ರಮ ಕೈಗೊಳ್ಳದೇ ಇದ್ದಲ್ಲಿ ಬಿಜೆಪಿ, ಸಂಘ ಪರಿವಾರ ಸೇರಿದಂತೆ ಹಿಂದೂ ಸಮಾಜ ಹೋರಾಟ ಮಾಡ್ತಿವಿ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹೇಳಿಕೆ ನೀಡಿದ್ದಾರೆ.