Connect with us

DAKSHINA KANNADA

ಈ ಬಾರಿಯ ಚುನಾವಣೆ ಸತ್ಯ ಮತ್ತು ಅಸತ್ಯದ ನಡುವಿನ ಸಮರ : ಸಚಿವ ಖಾದರ್

ಈ ಬಾರಿಯ ಚುನಾವಣೆ ಸತ್ಯ ಮತ್ತು ಅಸತ್ಯದ ನಡುವಿನ ಸಮರ : ಸಚಿವ ಖಾದರ್

ಮಂಗಳೂರು, ಎಪ್ರಿಲ್ 15 : ಈ ಬಾರಿಯ ವಿಧಾನ ಸಭಾ ಚುನಾವಣೆ ಸತ್ಯ ಮತ್ತು ಅಸತ್ಯದ ನಡುವಿನ ಸಮರವಾಗಿದೆ.

ಮಂಗಳೂರು ವಿಧಾನ ಸಭಾ ಕ್ಷೇತ್ರದಲ್ಲಿ ಕಳೆದ ಹಲವು ಸಮಯದಿಂದ ನನ್ನ ವಿರುದ್ಧ ನಿರಂತರ ಅಪಪ್ರಚಾರ ಮಾಡಲಾಗುತ್ತಿದೆ.

ಆದರೆ ಮತದಾರರೇ ಇದಕ್ಕೆ ಉತ್ತರ ಕೊಡಲಿದ್ದಾರೆ ಎಂದು ಸಚಿವ ಯು.ಟಿ ಖಾದರ್ ಹೇಳಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಕಳೆದ ನಾಲ್ಕು ವರ್ಷ ಹತ್ತು ತಿಂಗಳು ರಾಜ್ಯ ಸರ್ಕಾರ ಮಾಡಿದ ಕೆಲಸ ಕಾರ್ಯಗಳು ಹಾಗೂ ಅಭಿವೃದ್ದಿ ಕಾರ್ಯಗಳು ಜನತೆಯ ಮುಂದಿದೆ.

ನನ್ನ ರಾಜಕೀಯ ಶತ್ರುಗಳು ಕಳೆದ ಒಂದು ತಿಂಗಳಿನಿಂದ ನಿರಂತರವಾಗಿ ನನ್ನ ವಿರುದ್ಧ ಅಪಪ್ರಚಾರ ಹಾಗೂ ಸುಳ್ಳು ವಿಚಾರ ಹಬ್ಬುವ ಕೆಲಸಮಾಡುತ್ತಿದ್ದಾರೆ.

ಇದು ಉತ್ತರ ಪ್ರದೇಶವಲ್ಲ, ಉಳ್ಳಾಲದಲ್ಲಿ ಅಂತಹ ಪ್ರಯತ್ನ ಸಾಧ್ಯವಿಲ್ಲ ಎಂದು ಹೇಳಿದ ಅವರು ಜನತೆ ಇದಕ್ಕೆ ಸೊಪ್ಪು ಹಾಕಲ್ಲ ಎಂದು ಹೇಳಿದರು.

ಜಮ್ಮು ಕಾಶ್ಮೀರದಲ್ಲಿ ನಡೆದ ಹೇಯ ಕೃತ್ಯದ ಕುರಿತು ಮಾತನಾಡಿದ ಅವರು ಈ ಘಟನೆ ದೇಶದ ಜನಸಾಮಾನ್ಯರ ತಲೆ ತಗ್ಗಿಸುವಂತೆ ಮಾಡಿದೆ. ದೇಶದ ಸಂಸ್ಕೃತಿಗೆ ಇದು ಕಪ್ಪು ಚುಕ್ಕೆಯಂತಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು.

ಇಂತಹ ನೀಚರಿಗೆ ನ್ಯಾಯಾಲಯ ಜಾಮೀನು ನೀಡಬಾರದು. ಇಂತಹ ಕೃತ್ಯ ಮಾಡುವ ಅತ್ಯಾಚಾರಿಗಳಿಗೆ ಕಡಿಮೆಯೆಂದರೆ ಜೀವಾವಧಿ ಶಿಕ್ಷೆ ಹಾಗೂ ಹೆಚ್ಚೆಂದರೆ ಮರಣದಂಡನೆಯ ಶಿಕ್ಷೆ  ವಿಧಿಸಬೇಕು ಎಂದು ಒತ್ತಾಯಿಸಿದರು.

ಕಾನೂನಿಗೆ ತಿದ್ದುಪಡಿ ಅತ್ಯಗತ್ಯವಾದ್ದರಿಂದ ಕೇಂದ್ರದ ಸಚಿವರು ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಅವರು ಹೇಳಿದರು.

ಅಮಿತ್ ಶಾ ರಾಜ್ಯದಲ್ಲಿ ಕ್ರೈಂ ಬಗ್ಗೆ ಮಾತನಾಡುತ್ತಾರೆ. ಆದರೆ, ರಾಜ್ಯ ಕ್ರೈಂ‌ ರೇಟ್ ನಲ್ಲಿ ಕರ್ನಾಟಕ 9ನೇ ಸ್ಥಾನದಲ್ಲಿದ್ದು,

ಅದಕ್ಕಿಂತ‌ ಮುನ್ನ ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಿವೆ. ಈ ಹಿನ್ನೆಲೆಯಲ್ಲಿ ಅಮಿತ್ ಶಾ ಅವರಿಗೆ ಕರ್ನಾಟಕದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *