Connect with us

    LATEST NEWS

    ಈ ಬಾರಿ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ ತುಳುನಾಡ ಮಾಣಿಕ್ಯ ‘ಅರವಿಂದ ಬೋಳಾರ್’

    ಮಂಗಳೂರು: ಈ ಬಾರಿ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿಯಾಗಿ ಹಾಸ್ಯ ನಟ ತುಳುನಾಡ ಮಾಣಿಕ್ಯ ‘ಅರವಿಂದ ಬೋಳಾರ್’ (Arvinda Bolar) ಭಾಗವಹಿಸಲಿದ್ದಾರೆ.

    ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಅ.23ರಂದು ಬೆಳಗ್ಗೆ 11.30ಕ್ಕೆ ನಗರದ ಪತ್ರಿಕಾ ಭವನದಲ್ಲಿ ನಡೆಯುವ ಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಅರವಿಂದ ಬೋಳಾರ್ ಭಾಗವಹಿಸಿ ಸಂವಾದ ನಡೆಸಲಿದ್ದಾರೆ. ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸುವರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ .ಆರ್. ಉಪಸ್ಥಿತರಿರುವರು ಎಂದು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply