Connect with us

    LATEST NEWS

    ಸಂಸ್ಕೃತ ಭಾಷೆ ತಿಳಿಯದವರು ಸ್ವರ್ಗಕ್ಕೆ ಹೋಗಲು ಸಾಧ್ಯವಿಲ್ಲ- ಶ್ರೀ ಸುಗಣೇಂದ್ರ ತೀರ್ಥ ಸ್ವಾಮಿಜಿ

    ಉಡುಪಿ ಸೆಪ್ಟೆಂಬರ್ 02: ಸಂಸ್ಕೃತ ಭಾಷೆ ತಿಳಿಯದವರು ಸ್ವರ್ಗಕ್ಕೆ ಹೋಗಲು ಸಾಧ್ಯವಿಲ್ಲ. ಹೀಗಾಗಿ ಸ್ವರ್ಗಕ್ಕೆ ಹೋಗಬಯಸುವ ಎಲ್ಲರೂ ಸಂಸ್ಕೃತ ಭಾಷೆ ಕಲಿಯಬೇಕು ಎಂದು ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಹೇಳಿದ್ದಾರೆ.


    ಪರ್ಯಾಯ ಶ್ರೀ ಪುತ್ತಿಗೆ ಮಠ, ಶ್ರೀ ಕೃಷ್ಣ ಮಠದ ವತಿಯಿಂದ ರಾಜಾಂಗಣದಲ್ಲಿ ನಡೆದ ಶ್ರೀ ಕೃಷ್ಣ ಮಹೋತ್ಸವ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಸ್ವಾಮೀಜಿ ಮಾತನಾಡಿ, ಸಂಸ್ಕೃತ ಪವಿತ್ರ ಪಾವನ ಶ್ರೇಷ್ಠವಾಗಿರುವ ಭಾಷೆ ಎಂದು ಹೇಳಿದ್ದಾರೆ. ಸಂಸ್ಕೃತ ಸರಳ, ಸುಂದರ ಮತ್ತು ಸುಲಭವಾದ ಭಾಷೆಯಾಗಿದ್ದು, ಇದು ವಿಶ್ವಭಾಷೆ, ದೇವಭಾಷೆಯಾಗಿದೆ. ಎಲ್ಲಾ ಭಾಷೆಗಳ ಮೂಲ ಮತ್ತು ಜನನಿ ಸಂಸ್ಕೃತವಾಗಿದೆ. ಇದು ಕೇವಲ ಭಾರತೀಯ ಭಾಷೆಗಳ ಮೂಲವಲ್ಲದೇ ಆಂಗ್ಲಭಾಷೆಯ ಮೂಲವೂ ಆಗಿದೆ ಎಂದು ಅವರು ತಿಳಿಸಿದರು.


    ಇನ್ನು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕೇರಳದ ರಾಜ್ಯಪಾಲ ಆರಿಫ್‌ ಮೊಹಮ್ಮದ್ ಖಾನ್ ಅವರು ನಾವು ಕಷ್ಟಪಟ್ಟು ದುಡಿದು ಉನ್ನತಿಗೇರಿ ಸಂಪತ್ತು ಗಳಿಸಿದ ಮೇಲೆ ಅದನ್ನು ಬಡವರು, ಅಶಕ್ತರೊಂದಿಗೆ ಹಂಚಿಕೊಳ್ಳದಿದ್ದರೆ, ಅದು ಇನ್ನೊಬ್ಬರಿಂದ ಕಸಿದುಕೊಂಡಂತೆ ಎಂದರು. ಇಂತಹ ಜೀವನ ಮೌಲ್ಯಗಳನ್ನು ಪ್ರತಿಪಾದಿಸುವ ಸಂದೇಶಗಳನ್ನು ಶ್ರೀಕೃಷ್ಣ ದೇವರು ಸಾರಿದ್ದಾರೆ. ಅದನ್ನು ಪ್ರತಿಯೊಬ್ಬರೂ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು. ಭಗವದ್ಗೀತೆಯು ವೇದ, ಉಪನಿಷತ್‌ಗಳ ಸಾರವನ್ನು ಹೊಂದಿದೆ. ದೈವತ್ವದ ಬಗ್ಗೆ ಅರಿತುಕೊಂಡರೆ ಭಗವದ್ಗೀತೆಯ ಸಂದೇಶವನ್ನು ಅರ್ಥ ಮಾಡಿಕೊಳ್ಳಬಹುದು ಎಂದರು.

    Share Information
    Advertisement
    Click to comment

    You must be logged in to post a comment Login

    Leave a Reply