LATEST NEWS
ಸುಹಾಸ್ ಶೆಟ್ಟಿ ಹತ್ಯೆ ಬೆನ್ನಲ್ಲೆ ಹಿಂದೂ ಮುಖಂಡರಿಗೆ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಪೋಸ್ಟ್

ಮಂಗಳೂರು ಮೇ 04: ಬಜ್ಪೆಯಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಬೆನ್ನಲ್ಲೇ ಮತ್ತೆ ಹಿಂದೂ ಮುಖಂಡರಿಗೆ ಸಾಮಾಜಿಕ ಜಾಲತಾಣದಲ್ಲಿ ಹತ್ಯೆ ಮಾಡುವ ಬೆದರಿಕೆ ಪೋಸ್ಟ್ ಗಳು ಹರಿದಾಡುತ್ತಿದೆ.
ಕರಾವಳಿ ಭಾಗದಲ್ಲಿ ಬೂದಿ ಮುಚ್ಚಿದ ಕೆಂಡದಂಥಾ ಸ್ಥಿತಿಯಿದೆ. ಈ ಮಧ್ಯೆ ಮಂಗಳೂರಿನಲ್ಲಿ ಹಿಂದೂ ಮುಖಂಡರಿಗೆ ಜೀವ ಬೆದರಿಕೆ ಹಾಕಲಾಗುತ್ತಿದೆ. ಮೇ 5ರಂದು ರಾತ್ರಿ 9.30ಕ್ಕೆ ನಿನ್ನ ಸ್ಥಳದಲ್ಲೇ ಕೊಲ್ಲುವುದಾಗಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ವೈರಲ್ ಮಾಡಲಾಗಿದೆ. ಅಲ್ಲದೆ ಸುಹಾಸ್ ಶೆಟ್ಟಿ ಪೋಟೋಗೆ ರೈಟ್ ಚಿಹ್ನೆ ಹಾಕಿ ವಿಕೃತಿ ಮೆರೆಯಲಾಗಿದೆ.
