Connect with us

LATEST NEWS

ಫೋರಂ ಫಿಜಾ ಮಾಲ್‍ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳ ಬಂಧನ

ಫೋರಂ ಫಿಜಾ ಮಾಲ್‍ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳ ಬಂಧನ

ಮಂಗಳೂರು ಸೆಪ್ಟೆಂಬರ್ 25: ಹುಡುಗಿಯರನ್ನು ಚುಡಾಯಿಸಬೇಡಿ, ಇದು ಹಿಂದೂ ರಾಷ್ಟ್ರ ಎಂದು ತಿಳುವಳಿಕೆ ಹೇಳಿದ ಯುವಕನನ್ನು ಗುಂಪೊಂದು ಅಟ್ಟಾಡಿಸಿ ಹೊಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಅಬ್ದುಲ್ ರಹೀಮ್ ಮತ್ತು ಮೊಹೀದ್ದಿನ್ ಸಪ್ವಾನ್ ಎಂದು ಗುರುತಿಸಲಾಗಿದ್ದು, ಮತ್ತೊಬ್ಬ ಆರೋಪಿ ಅಪ್ರಾಪ್ತ ವಯಸ್ಸಿನವನಾಗಿದ್ದಾನೆ ಎಂದು ಪೊಲೀಸ್ ಆಯುಕ್ತ ಡಾ. ಹರ್ಷ ತಿಳಿಸಿದ್ದಾರೆ.

ಇಂದು ಮಧ್ಯಾಹ್ನ ನಗರದ ಪೋರಂ ಪಿಝಾ ಮಾಲ್ ನಲ್ಲಿ ಈ ಘಟನೆ ನಡೆದಿದ್ದು, ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿರುವ ಯುವಕ ಮಂಜುನಾಥ್ ನನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ.