Connect with us

    KARNATAKA

    ಕೃಷಿ ಹೊಂಡಕ್ಕೆ ಬಿದ್ದು ಮೂವರು ಮಕ್ಕಳು ದಾರುಣ ಸಾವು..!

    ಮಂಡ್ಯ: ಕೃಷಿ ಹೊಂಡಕ್ಕೆ ಬಿದ್ದು ಮೂವರು ಮಕ್ಕಳು ಸಾವನ್ನಪ್ಪಿದ ದಾರುಣ ಘಟನೆ  ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಬಳ್ಳೇಅತ್ತಿಗುಪ್ಪೆ ಗ್ರಾಮದಲ್ಲಿ ಸಂಭವಿಸಿದೆ.

    ಮಹದೇವಪ್ಪ ಎಂಬವರ ಮಕ್ಕಳಾದ ಚಂದನ್, ಕಾರ್ತಿಕ್ ಮತ್ತು ಮಲ್ಲಿಕಾರ್ಜುನ ಎಂಬವರ ಪುತ್ರ ರಿತೇಶ್ ಮೃತ ದುರ್ದೈವಿಗಳಾಗಿದ್ದಾರೆ. ಮನೆಯಲ್ಲಿ ಯಾರು ಇಲ್ಲದ  ಸಮಯದಲ್ಲಿ ಸ್ನೇಹಿತರೊಂದಿಗೆ ಈಜಾಡಲು ತೆರಳಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

    ತೋಟದ ಬಳಿ ಹೋದ ಮಹದೇವಪ್ಪ ಕೃಷಿ ಹೊಂಡದಲ್ಲಿ ತೇಲುತ್ತಿದ್ದ ಮಕ್ಕಳ ಮೃತದೇಹ ಕಂಡು ಗಾಬರಿಗೊಂಡು ಕಿರುಚಿದ್ದಾರೆ.

    ಅಕ್ಕಪಕ್ಕದ ತೋಟದಲ್ಲಿ ಕೆಲಸ ಮಾಡುತ್ತಿದ್ದವರು ಓಡಿ ಬಂದು ಮೃತದೇಹಗಳನ್ನು ಮೇಲೆತ್ತಿದ್ದಾರೆ. ಮಕ್ಕಳನ್ನು ಕಳಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ‌. ಪಾಂಡವಪುರ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿದ್ದರು.

    Share Information
    Advertisement
    Click to comment

    You must be logged in to post a comment Login

    Leave a Reply