ಬೊಲೆರೋ ಹಾಗೂ ಲಾರಿ ನಡುವೆ ಭೀಕರ ರಸ್ತೆ ಅಪಘಾತ ಮೂವರ ಸಾವು

ಪುತ್ತೂರು ಜುಲೈ 2: ಮಹೀಂದ್ರಾ ಬೊಲೆರೋ ಹಾಗೂ ಲಾರಿ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಮೂವರು ಮೃತಪಟ್ಟು ಓರ್ವ ಗಂಭೀರ ಗಾಯಗೊಂಡ ಘಟನೆ ಸೋಮವಾರ ತಡರಾತ್ರಿ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿಯಲ್ಲಿ ಸಂಭವಿಸಿದೆ.

ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಲಾರಿ ಹಾಗೂ ಬೊಲೆರೋ ನಡುವೆ ನೆಲ್ಯಾಡಿಯ ಬೆಥನಿ ವಿದ್ಯಾಸಂಸ್ಥೆಯ ಬಳಿ ಹಳ್ಳ ಸೇತುವೆ ಸಮೀಪ ಮುಖಾಮುಖಿ ಢಿಕ್ಕಿಯಾಗಿದೆ. ಘಟನೆಯಲ್ಲಿ ಬೊಲೆರೋದಲ್ಲಿದ್ದ ಸತ್ತಾರ್ ಮೊರಂಕಾಲ ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದು, ಸಾಂಮ್ಸನ್ ಹಾಗೂ ಸೈರಸ್ ಎಂಬವರು ನಂತರದಲ್ಲಿ ಮೃತ ಪಟ್ಟಿದ್ದಾರೆ.

ಜನಾರ್ದನ ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳು ಸ್ಥಿತಿ ಕೂಡಾ ಚಿಂತಾಜನಕವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಉಪ್ಪಿನಂಗಡಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

2 Shares

Facebook Comments

comments