Connect with us

    LATEST NEWS

    ಅಪಾರ್ಟ್ ಮೆಂಟ್ ನಲ್ಲಿ ವೈಶ್ಯಾವಾಟಿಕೆ ದಂಧೆ – ಮೂವರು ಆರೋಪಿಗಳು ಅರೆಸ್ಟ್…!!

    ಮಂಗಳೂರು ಮಾರ್ಚ್ 02: ಮಂಗಳೂರಿನ ಅಪಾರ್ಟ್ ಮೆಂಟ್ ಒಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ ನಾಲ್ವರು ಯುವತಿಯರನ್ನು ರಕ್ಷಣೆ ಮಾಡಿದ್ದಾರೆ.

    ಬಂಧಿತರನ್ನು ಕೆ.ಪಿ. ಹಮೀದ್ (54), ಅನುಪಮಾ ಶೆಟ್ಟಿ(46), ನಿಶ್ಮಿತಾ (23) ಎಂದು ಗುರುತಿಸಲಾಗಿದೆ. ಆರೋಪಿಗಳು ಕದ್ರಿ ಪೋಲಿಸ್ ಠಾಣಾ ವ್ಯಾಪ್ತಿಯ ಪೀಬಿ ರೆಸಿಡೆನ್ಸಿ ಎಂಬ ಅಪಾರ್ಟ್ ಮೆಂಟ್ ನ ಪ್ಲ್ಯಾಟ್ ಒಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದರೆಂಬ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸ್ ರು ದಾಳಿ ನಡೆಸಿದ್ದಾರೆ.

    ಯುವತಿಯರನ್ನು ಬಳಸಿಕೊಂಡು ಅನೈತಿಕ ಚಟುವಟಿಕೆ ದಂಧೆಯನ್ನು ನಡೆಸುತ್ತಿದ್ದ ದಲ್ಲಾಳಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ 5 ಮೊಬೈಲ್ ಫೋನುಗಳು ಹಾಗೂ 50,000 ರೂ. ನಗದು, ಮಾರುತಿ 800 ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಮುಂದಿನ ಕ್ರಮಕ್ಕಾಗಿ ಪ್ರಕರಣವನ್ನು ಮಂಗಳೂರು ಪೂರ್ವ ಪೊಲೀಸ್ ಠಾಣೆಗೆ ಹಸ್ತಾಂತರಿಸಿಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply