ದೆಹಲಿ ಫೆಬ್ರವರಿ 09: ಪ್ಲೈಓವರ್ ಮೇಲೆ ನಿಲ್ಲಿಸಿದ್ದ ಕಾರಿನಲ್ಲಿ ಮೂರು ಮೃತದೇಹ ಪತ್ತೆಯಾದ ಘಟನೆ ದೆಹಲಿಯ ಪೀರಗಢಿ ಫ್ಲೈಓವರ್ ನಲ್ಲಿ ಸಂಭವಿಸಿದೆ.

ಕಾರಿನಲ್ಲಿ ಓರ್ವ ಮಹಿಳೆ ಮತ್ತು ಇಬ್ಬರು ಪುರುಷರ ಶವಗಳು ಪತ್ತೆಯಾಗಿವೆ. ಕಾರ್ ನಲ್ಲಿ ಪತ್ತೆಯಾದ ಶವಗಳ ಮೇಲೆ ಗಾಯದ ಗುರುತುಗಳಿಲ್ಲ. ಮೂವರು ಒಟ್ಟಿಗೆ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಈ ಘಟನೆಯು ಪ್ರದೇಶದಲ್ಲಿ ಭೀತಿಯ ವಾತಾವರಣವನ್ನು ಸೃಷ್ಟಿಸಿದ್ದು, ವಿವಿಧ ಊಹಾಪೋಹಗಳಿಗೆ ಕಾರಣವಾಗಿದೆ. ಪೊಲೀಸರು ಮತ್ತು ವಿಧಿವಿಜ್ಞಾನ ತಂಡಗಳು ತನಿಖೆ ನಡೆಸುತ್ತಿವೆ.
ವರದಿಗಳ ಪ್ರಕಾರ, ಪೀರಗಢಿ ಫ್ಲೈಓವರ್ ಮೇಲೆ ಟವೇರಾ ಕಾರು ಬಹಳ ಸಮಯದಿಂದ ನಿಂತಿತ್ತು.
ಒಳಗೆ ನೋಡಿದಾಗ ಮೂವರು ಪ್ರಜ್ಞಾಹೀನ ಸ್ಥಿತಿಯಲ್ಲಿ ಇರುವುದು ಕಂಡುಬಂದಿದೆ. ಘಟನೆಯ ಬಗ್ಗೆ ಪೊಲೀಸರಿಗೆ ವರದಿ ಮಾಡಲಾಗಿದೆ. ತನಿಖೆಯ ನಂತರ, ಮೂವರು ಜನರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಕಾರು ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಿಂದ ಎಲ್ಲಾ ಪುರಾವೆಗಳನ್ನು ಸಂಗ್ರಹಿಸಿದ ನಂತರ, ಪೊಲೀಸರು ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ತನಿಖೆ ಕೂಡ ಆರಂಭವಾಗಿದೆ. ಎಲ್ಲಾ ಆಯಾಮಗಳಲ್ಲೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.