Connect with us

LATEST NEWS

ಉಡುಪಿಯಲ್ಲಿ ಮೂವರು ಪೊಲೀಸರಿಗೆ ಕೊರೊನಾ ಸೊಂಕು

ಉಡುಪಿಯಲ್ಲಿ ಮೂವರು ಪೊಲೀಸರಿಗೆ ಕೊರೊನಾ ಸೊಂಕು

ಉಡುಪಿ ಮೇ.24: ಉಡುಪಿಯಲ್ಲಿ ಮೂವರು ಪೊಲೀಸರಿಗೆ ಕೊರೋನಾ ಸೊಂಕು ದೃಢಪಟ್ಟಿದೆ. ಕಾರ್ಕಳ ಗ್ರಾಮಾಂತರ, ಅಜೆಕಾರು , ಬ್ರಹ್ಮಾವರ ಪೊಲೀಸ್ ಠಾಣೆಯ ಮೂವರು ಪೊಲೀಸರಿಗೆ ಕೊರೊನಾ ಸೊಂಕು ದೃಢಪಟ್ಟಿದೆ.

ಸದ್ಯ ಮೂರು ಠಾಣೆಯ ಎಲ್ಲಾ ಪೊಲೀಸರು ಕ್ವಾರಂಟೈನ್ ನಲ್ಲಿಡಲು ಜಿಲ್ಲಾಡಳಿತ ನಿರ್ಧರಿಸಿದೆ. ಮೂರು ಪೊಲೀಸ್ ಠಾಣೆಯಲ್ಲಿ ಸಂಪೂರ್ಣ ಸ್ಯಾನಿಟೈಸರ್ ಸಿಂಪಡಣೆ ಮಾಡಿ, ಸ್ಯಾನಿಟೈಸೇಶನ್ ಮಾಡಿ ಎರಡು ದಿನ ಬಿಟ್ಟು ಮತ್ತೆ ಠಾಣೆ ಕಾರ್ಯಾರಂಭ ಮಾಡಲಾಗುವುದೆಂದು ಉಡುಪಿ ಎಸ್ಪಿ ವಿಷ್ಣುವರ್ಧನ ಮಾಹಿತಿ ನೀಡಿದ್ದಾರೆ. ಇನ್ನು ಮೂವರ ಪೊಲೀಸರ ಸಂಪರ್ಕಿತರ ಪಟ್ಟಿಯನ್ನು ತಯಾರಿಸಲಾಗುತ್ತಿದ್ದು, ಕೊರೋನಾ ಸಂಪರ್ಕದ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಉಡುಪಿ ಎಸ್ ಪಿ ವಿಷ್ಣುವರ್ಧನ್ ಮಾಹಿತಿ ನೀಡಿದ್ದಾರೆ.

Facebook Comments

comments