Connect with us

  LATEST NEWS

  ಭೀಕರ ರೈಲು ಅಪಘಾತ – ಎರಡು ಪ್ರಯಾಣಿಕರ ರೈಲು ಹಾಗೂ ಗೂಡ್ಸ್ ರೈಲಿನ ನಡುವೆ ನಡೆದ ಅಪಘಾತ – ನೂರಾರು ಜನರ ಸಾವಿನ ಶಂಕೆ…!!

  ಓಡಿಶಾ ಜೂನ್ 02: ಹಲವು ವರ್ಷಗಳ ಬಳಿಕ ಭೀಕರ ರೈಲು ಅಪಘಾತ ಸಂಭವಿಸಿದ್ದು, ಗೂಡ್ಸ್ ರೈಲು ಹಾಗೂ ಎರಡು ಪ್ರಯಾಣಿಕ ರೈಲಿನ ಮಧ್ಯೆ ನಡೆದ ಅಪಘಾತದಲ್ಲಿ ನೂರಕ್ಕೂ ಅಧಿಕ ಮಂದಿ ಸಾವನಪ್ಪಿದ್ದಾರೆ ಎಂದು ಹೇಳಲಾಗಿದೆ.


  ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ಈ ಅಪಘಾತ ಸಂಭವಿಸಿದೆ. ಒಡಿಶಾದಲ್ಲಿ ಗೂಡ್ಸ್​ ರೈಲಿಗೆ ಯುಪಿ ಶಾಲಿಮಾರ್- ಚೆನ್ನೈ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ಡಿಕ್ಕಿಯಾಗಿದ್ದು, ಹಲವು ಬೋಗಿಗಳು ಹಳಿ ತಪ್ಪಿದ್ದವು. ಈ ಬೋಗಿಗಳಿಗೆ ಯಶವಂತಪುರ ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್‌ ಡಿಕ್ಕಿ ಹೊಡೆದು, ಇನ್ನಷ್ಟು ಬೋಗಿಗಳು ಹಳಿ ತಪ್ಪಿವೆ. ಈ ಭೀಕರ ದುರಂತದಲ್ಲಿ ಸಾವಿನ ಸಂಖ್ಯೆ 300ರ ಗಡಿ ದಾಟುವ ಆತಂಕ ವ್ಯಕ್ತವಾಗಿದೆ.


  ಕೋರಮಂಡಲ್ ಎಕ್ಸ್‌ಪ್ರೆಸ್‌ನ ಹದಿನೈದು ಬೋಗಿಗಳು ಹಳಿ ತಪ್ಪಿವೆ. ಇದಲ್ಲದೆ, ಇತರ ಎರಡು ರೈಲುಗಳು ಹಳಿತಪ್ಪಿವೆ. ಇಂದು (ಜೂ.2) ಸಂಜೆ 7 ಗಂಟೆಗೆ ಶಾಲಿಮಾರ್-ಚೆನ್ನೈ ಕೋರಮಂಡಲ್ ಎಕ್ಸ್‌ಪ್ರೆಸ್‌ನ 10-12 ಬೋಗಿಗಳು ಬಾಲೇಶ್ವರ ಬಳಿ ಹಳಿತಪ್ಪಿ ಎದುರಿನ ಹಳಿಯಲ್ಲಿ ಬಿದ್ದಿವೆ. ಸ್ವಲ್ಪ ಸಮಯದ ನಂತರ, ಯಶವಂತಪುರದಿಂದ ಹೌರಾಕ್ಕೆ ಹೋಗುತ್ತಿದ್ದ ಮತ್ತೊಂದು ರೈಲು ಹಳಿತಪ್ಪಿದ ಬೋಗಿಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಅದರ 3-4 ಬೋಗಿಗಳು ಹಳಿತಪ್ಪಿದವು ಎಂದು ರೈಲ್ವೆ ವಕ್ತಾರ ಅಮಿತಾಭ್ ಶರ್ಮಾ ಹೇಳಿದರು.

  Share Information
  Advertisement
  Click to comment

  You must be logged in to post a comment Login

  Leave a Reply