KARNATAKA
ರಾಷ್ಟ್ಪೀಯ ಶಿಕ್ಷಣ ನೀತಿಗೆ ಎಳ್ಳು ನೀರು – ರಾಜ್ಯದಲ್ಲಿ ಮತ್ತೆ ಮೂರು ವರ್ಷಗಳ ಡಿಗ್ರಿ
ಬೆಂಗಳೂರು, ಮೇ 9: ರಾಷ್ಟ್ರೀಯ ಶಿಕ್ಷಣ ನೀತಿಯ ಅನ್ವಯ ನಾಲ್ಕು ವರ್ಷಗಳ ಪದವಿಗೆ ನೀಡಲಾಗಿದ್ದ ಅವಕಾಶವನ್ನು ರಾಜ್ಯಸರಕಾರ ಹಿಂಪಡೆದಿದ್ದು, ಮತ್ತೆ ರಾಜ್ಯದಲ್ಲಿ ಮೂರು ವರ್ಷಗಳ ಡಿಗ್ರಿ ಜಾರಿಯಾಗಲಿದೆ.
ಕೇಂದ್ರ ಸರಕಾರ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ತಂದಾಗ ಆಗಿನ ಬಿಜೆಪಿ ಸರಕಾರ ಕೂಡಲೇ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತಂದಿತ್ತು. ಇದೀಗ ಕಾಂಗ್ರೇಸ್ ಸರಕಾರ ಅಧಿಕಾರಕ್ಕೆ ಬಂದ ಕೂಡಲು ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರದ್ದಗೊಳಿಸಲು ನಿರ್ಧರಿಸಿ ರಾಜ್ಯ ಶಿಕ್ಷಣ ನೀತಿ ಜಾರಿಗೆ ಮುಂದಾಗಿತ್ತು, ಅದರಂತೆ ಇದೀಗ ರಾಜ್ಯವು ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅಳವಡಿಸಿಕೊಳ್ಳುವುದಕ್ಕಿಂತಲೂ ಮೊದಲು, ಅಂದರೆ 2021-22 ಕ್ಕಿಂತ ಮೊದಲು ಅಸ್ತಿತ್ವದಲ್ಲಿದ್ದ ಸಾಂಪ್ರದಾಯಿಕ ಮೂರು ವರ್ಷಗಳ ಪದವಿ ಕಾರ್ಯಕ್ರಮಕ್ಕೆ ಕರ್ನಾಟಕ ಮರಳಿದಂತಾಗಿದೆ.
ಇದೀಗ ತನ್ನ ಆದೇಶವನ್ನು ಸಮರ್ಥಿಸಿಕೊಂಡಿರುವ ಉನ್ನತ ಶಿಕ್ಷಣ ಇಲಾಖೆ, ಎಸ್ಇಪಿ ಆಯೋಗದ ವಿಸ್ತೃತ ಸಮಾಲೋಚನೆಯನ್ನು ಆಧರಿಸಿದೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದೆ. ಐತಿಹಾಸಿಕ ಅನುಭವ, ವಿದ್ಯಾರ್ಥಿಗಳ ಒಟ್ಟಾರೆ ಹಿತಾಸಕ್ತಿ, ಸಮಾನತೆ, ಸಾಮಾಜಿಕ ನ್ಯಾಯ ಮತ್ತು ವಿವಿಧ ಸಾಮಾಜಿಕ-ಆರ್ಥಿಕ ಹಿನ್ನೆಲೆಯ ವಿದ್ಯಾರ್ಥಿಗಳಿಗೆ ಸಮಾನ ಅವಕಾಶವನ್ನು ನೀಡುವುದನ್ನು ಗಮನದಲ್ಲಿಟ್ಟುಕೊಂಡು ಎಸ್ಇಪಿ ಆಯೋಗ ಶಿಫಾರಸುಗಳ್ನು ಮಾಡಿದೆ ಎಂದು ಇಲಾಖೆ ಹೇಳಿದೆ.