Connect with us

  DAKSHINA KANNADA

  ವಿದ್ಯುತ್ ಖಾಸಗೀಕರಣದ ಮೂಲಕ ದೇಶವನ್ನೇ ಕತ್ತಲು ಮಾಡುವ ಹುನ್ನಾರ – ಸುನಿಲ್ ಕುಮಾರ್ ಬಜಾಲ್

  ಮಂಗಳೂರು :  ವಿದ್ಯುತ್ ಕ್ಷೇತ್ರದಲ್ಲಿನ ಉತ್ಪಾದನೆ,ವಿತರಣೆ ಹಾಗೂ ಕಂದಾಯ ಆಕರಣೆ ಇದ್ಯಾವುದನ್ನೂ ಸರಕಾರ ಮಾಡಬಾರದು. ಅವೆಲ್ಲವನ್ನೂ ಖಾಸಗೀಯವರಿಗೆ ವಹಿಸಿ ಸರಕಾರ ತನ್ನ ಜವಾಬ್ದಾರಿಯಿಂದ ಮುಕ್ತವಾಗಬೇಕು ಎಂದು ಕೇಂದ್ರ ಸರಕಾರದ ಅಡಿಯಲ್ಲಿರುವ ನೀತಿ ಆಯೋಗ ಅತ್ಯಂತ ಸ್ಪಷ್ಟವಾಗಿ ಹೇಳಿರುವುದು, ದೇಶದ ಸಂಪತ್ತನ್ನು ಮಾರಲು ಹೊರಟ ಕೇಂದ್ರ ಸರಕಾರದ ಧೋರಣೆ ಏನೆಂಬುದು ಜಗಜ್ಜಾಹೀರಾಗಿದೆ.ವಿದ್ಯುತ್ ಕ್ಷೇತ್ರವನ್ನು ಸಂಪೂರ್ಣ ಖಾಸಗೀಕರಣಗೊಳಿಸುವ ಮೂಲಕ ಇಡೀ ದೇಶವನ್ನೇ ಕತ್ತಲು ಮಾಡಲು ಹೊರಟಿದೆ. ಎಂದು CITU ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ರವರು ಕೇಂದ್ರ ಸರಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.

  ಕೇಂದ್ರ ಸರ್ಕಾರದ ರೈತ ಕಾರ್ಮಿಕ ವಿರೋಧಿ ನೀತಿಗಳನ್ನು ಹಿಮ್ಮೆಟ್ಟಿಸಲು ಹಾಗೂ ವಿದ್ಯುತ್, ರೈಲ್ವೇ ಖಾಸಗೀಕರಣ ಮಾಡಲು ಹೊರಟ ಕೇಂದ್ರ ಸರಕಾರದ ಕಾರ್ಪೊರೇಟ್ ಪರ ನೀತಿಗಳನ್ನು ಖಂಡಿಸಿ ನವೆಂಬರ್ ತಿಂಗಳಲ್ಲಿ ದೇಶಾದ್ಯಂತ ನಡೆಯುವ ಪ್ರಚಾರಾಂದೋಲನದ ಭಾಗವಾಗಿ ಉಳ್ಳಾಲ ತಾಲೂಕು ಮಟ್ಟದ ವಾಹನ ಪ್ರಚಾರ ಜಾಥಾವನ್ನು ಉದ್ಘಾಟಿಸುತ್ತಾ ಅವರು ಈ ಮಾತುಗಳನ್ನು ಹೇಳಿದರು.

  ಜಾಥಾವನ್ನು ಉದ್ದೇಶಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕ್ರಷ್ಣಪ್ಪ ಸಾಲ್ಯಾನ್ ರವರು ಮಾತನಾಡುತ್ತಾ, ದೇಶದ ಸಾರ್ವಜನಿಕ ಉದ್ದಿಮೆಗಳನ್ನು ರಾಷ್ಟ್ರೀಯ ನಗದೀಕರಣ ಪೈಪ್ ಲೈನ್ ಯೋಜನೆ ಅಡಿಯಲ್ಲಿ ದೈತ್ಯ ಕಾರ್ಪೊರೇಟ್ ಕಂಪೆನಿಗಳಿಗೆ ಹಸ್ತಾಂತರಿಸುವ ಪ್ರಕ್ರಿಯೆ ಶರವೇಗದಲ್ಲಿದೆ.ವಿಮಾನ ನಿಲ್ದಾಣ,ಹೆದ್ದಾರಿಗಳು, ಬಂದರುಗಳು, ರೈಲ್ವೇ, ವಿದ್ಯುತ್, ಶಿಕ್ಷಣ, ಬ್ಯಾಂಕುಗಳು ಹಾಗೂ ರಕ್ಷಣಾ ವಲಯಗಳನ್ನು ಖಾಸಗೀಕರಣದ ಕಬಂಧಬಾಹುಗಳಲ್ಲಿ ಬಂಧಿಸಲಾಗಿದೆ ಎಂದು ಹೇಳಿದರು

  ಜಾಥಾ ಕಾರ್ಯಕ್ರಮದಲ್ಲಿ CITU ಜಿಲ್ಲಾ ನಾಯಕರಾದ ಯು.ಜಯಂತ ನಾಯಕ್, ಪದ್ಮಾವತಿ ಶೆಟ್ಟಿ, ರೋಹಿದಾಸ್, ಇಬ್ರಾಹಿಂ ಮದಕ,ಸುಂದರ ಕುಂಪಲ,ಮಹಮ್ಮದ್ ಅನ್ಸಾರ್ ,ನಾರಾಯಣ ತಲಪಾಡಿ,ಜಯಂತ ಅಂಬ್ಲಮೊಗರು ಮುಂತಾದವರು ಉಪಸ್ಥಿತರಿದ್ದರು.

  Share Information
  Advertisement
  Click to comment

  You must be logged in to post a comment Login

  Leave a Reply