Connect with us

LATEST NEWS

ವಿವಾಹ ಕಾರ್ಯಕ್ರಮದಲ್ಲಿ ಹುಲಿ ಕುಣಿತ, 7 ಮಂದಿ ಮೇಲೆ ಎಫ್​ಐಆರ್

ಉಡುಪಿ, ಮೇ 23: ಕೋವಿಡ್​ ನಿಯಮ ಉಲ್ಲಂಘನೆ ಮಾಡಿ ವಿವಾಹದ ಮೆಹಂದಿ ಕಾರ್ಯಕ್ರಮದಲ್ಲಿ ಭರ್ಜರಿ ಹುಲಿ ಕುಣಿತ ಮಾಡಿದ 7 ಮಂದಿಯ ಮೇಲೆ ಪ್ರಕರಣ ದಾಖಲಾದ ಘಟನೆ ಜಿಲ್ಲೆಯ ಕುಂದಾಪುರದಲ್ಲಿ ನಡೆದಿದೆ.

ಜಿಲ್ಲೆಯ ಕುಂದಾಪುರದ ಕರ್ಕುಂಜೆ ಗ್ರಾಮದ ಅಸೋಡಿ ಎಂಬಲ್ಲಿ ಭುಜಂಗ ಶೆಟ್ಟಿ ಎಂಬುವವರ ಮನೆಯಲ್ಲಿ ನಿನ್ನೆ ಮೆಹಂದಿ ಕಾರ್ಯಕ್ರಮ ನಡೆದಿತ್ತು.

ಮಾಸ್ಕ್ ಬಳಸದೇ, ಸಾಮಾಜಿಕ ಅಂತರ ಇಲ್ಲದೆ ಕುಣಿದಿದ್ದ ಯುವಕರು ಕೋವಿಡ್​​ ನಿಯಮ ಉಲ್ಲಂಘನೆ ಮಾಡಿದ್ದರು. ಡ್ಯಾನ್ಸ್‌ ‌ಮಾಡಿದ ಏಳು ಮಂದಿಯ ವಿರುದ್ಧ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *