LATEST NEWS
ಮಂಗಳೂರು – ಹುಲಿ ಕುಣಿತದ ವೇಳೆ ಆಯತಪ್ಪಿ ಬಿದ್ದ ಹುಲಿ ವೇಷಧಾರಿ ವಿಡಿಯೋ ವೈರಲ್

ಮಂಗಳೂರು ಅಕ್ಟೋಬರ್ 24: ಹುಲಿಕುಣಿತದ ವೇಳೆ ಹುಲಿ ವೇಷಧಾರಿಯೊಬ್ಬರು ಆಯತಪ್ಪಿ ಬಿದ್ದು ಗಾಯಗೊಂಡ ಘಟನೆ ಮಂಗಳಾದೇವಿ ದೇವಸ್ಥಾನದ ವಠಾರದಲ್ಲಿ ನಡೆದಿದೆ. ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ.
ಮಂಗಳಾದೇವಿಯ ಎದುರು ಹುಲಿವೇಷ ಧರಿಸಿ ಪ್ರದರ್ಶನದ ವೇಳೆ ಘಟನೆ ನಡೆದಿದ್ದು, ಮುಳಿಹಿತ್ಲು ಎಂಬಲ್ಲಿನ ಹುಲಿವೇಷ ತಂಡದ ಕುಣಿತದ ವೇಳೆ ದುರ್ಘಟನೆ ನಡೆದಿದೆ. ಹುಲಿವೇಷಧಾರಿಯೊಬ್ಬರು ಕಸರತ್ತು ಪ್ರದರ್ಶನದ ವೇಳೆ ರಿವರ್ಸ್ ಪಲ್ಟಿ ಹೊಡೆಯುತ್ತಿದ್ದರು. ಈ ವೇಳೆ ಆಯ ತಪ್ಪಿ ತಲೆ ನೆಲಕ್ಕೆ ಬಡಿದು ಅನಾಹುತ ನಡೆದಿದೆ. ತಲೆ ನೆಲಕ್ಕೆ ಬಡಿದು ಕತ್ತು ಉಳುಕಿದ ಪರಿಣಾಮ ಹುಲಿವೇಷಧಾರಿಗೆ ಗಾಯವಾಗಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಿ ಹುಲಿವೇಷಧಾರಿ ಯುವಕನಿಗೆ ಚಿಕಿತ್ಸೆ ನೀಡಲಾಗಿದೆ.

ಸದ್ಯ ಸಣ್ಣ ಗಾಯಗಳೊಂದಿಗೆ ಅಪಾಯದಿಂದ ಯುವಕ ಪಾರಾಗಿದ್ದಾರೆ. ಸದ್ಯ ಘಟನೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.