Connect with us

FILM

ಹುಲಿ ಉಗುರು ಪ್ರಕರಣ – ನಟ ದರ್ಶನ್ ಮತ್ತು ವಿನಯ್ ಗುರೂಜಿ ಪೋಟೋ ವೈರಲ್ – ಕ್ರಮಕ್ಕೆ ಆಗ್ರಹ

ಬೆಂಗಳೂರು ಅಕ್ಟೋಬರ್ 24: ಹುಲಿ ಉಗುರುಳ್ಳ ಡಾಲರ್ ಚೈನ್ ನ್ನು ಚಮ್ಮ ಕೊರಳಿಗೆ ಹಾಕಿಕೊಂಡಿದ್ದ ಬಿಗ್ ಬಾಸ್ ಸ್ಪರ್ಧಿ ವರ್ತೂರ್ ಸಂತೋಷ್ ಅರೆಸ್ಟ್ ಆದ ಬೆನ್ನಲ್ಲೇ ಇದೀಗ ಹುಲಿ ಉಗುರು ಧರಿಸಿರುವ ಕೆಲವು ಗಣ್ಯರಿಗೆ ಬಿಸಿ ಮುಟ್ಟಿದ್ದು, ನಟ ದರ್ಶನ್ ಸೇರಿದಂತೆ ಹಲವರ ವಿರುದ್ದ ದೂರು ದಾಖಲಾಗಿದೆ.


ಬೆಂಗಳೂರಿನಲ್ಲಿರುವ ಸರ್ವಸಂಘಗಳ ಒಕ್ಕೂಟದ ಅಧ್ಯಕ್ಷ ಸಿ.ಎಂ. ಶಿವಕುಮಾರ್ ನಾಯಕ್ ಎನ್ನುವವರು ಸ್ಯಾಂಡಲ್ ವುಡ್ ಚಾಲೆಂಜಿಂಗ್ ಸ್ಟಾರ್ ದರ್ಶನ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಹಾಗೂ ಜನಪ್ರಿಯ ಧರ್ಮಗುರುವಾದ ವಿನಯ್ ಗುರೂಜಿಯವರ ವಿರುದ್ಧ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದ್ದಾರೆ.


ನಟ ದರ್ಶನ್ ಅವರು ತಮ್ಮದೊಂದು ಫೋಟೋದಲ್ಲಿ ಚಿನ್ನದ ಚೈನ್ ನಲ್ಲಿ ಹುಲಿಯ ಉಗುರು ಇರುವ ಡಾಲರ್ ನ್ನು ತಮ್ಮ ಕೊರಳಿಗೆ ಹಾಕಿಕೊಂಡಿದ್ದಾರೆ. ವಿನಯ್ ಗುರೂಜಿಯವರ ಭಾವಚಿತ್ರವೊಂದರಲ್ಲಿ ಹುಲಿಯ ಚರ್ಮದ ಮೇಲೆ ಕುಳಿತಿದ್ದಾರೆ. ಇದು ಕಾನೂನಿನ ಉಲ್ಲಂಘನೆಯಾಗಿದೆ. ಅರಣ್ಯ ಕಾಯ್ದೆಯಡಿ ಇವರ ಮೇಲೆ ದೂರು ದಾಖಲು ಮಾಡಬೇಕೆಂದು ಸರ್ವ ಸಂಘಟನೆಗಳ ಒಕ್ಕೂಟದಿಂದ ದೂರು ಕೊಡುತ್ತಿದ್ದೇವೆ ಎಂದು ಹೇಳಿರುವ ಅವರು, ಈ ಬರಹದ ಕೆಳಗಡೆ ಒಕ್ಕೂಟದ ಅಧ್ಯಕ್ಷರು ಸಿ.ಎಂ. ಶಿವಕುಮಾರ್ ಎಂದು ತಮ್ಮ ಹೆಸರನ್ನು ಹಾಕಿಕೊಂಡಿದ್ದಾರೆ.

ಇನ್ನು ತಮ್ಮ ಪೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬೆನ್ನಲ್ಲೆ  ಈ ಕುರಿತಂತೆ ಸ್ಪಷ್ಟನೆ ನೀಡಿರುವ ವಿನಯ್ ಗುರೂಜಿ, ಹುಲಿ ಚರ್ಮ ಅಕ್ರಮದಲ್ಲ. ಆಶ್ರಮಕ್ಕೆ ಭಕ್ತರು ನೀಡಿದ್ದು. ಅದಕ್ಕೆ ಸೂಕ್ತ ಮಾಲೀಕತ್ವ ಪ್ರಮಾಣ ಪತ್ರಕೂಡ ಇದೆ. ಶೀಘ್ರದಲ್ಲೇ ಅದನ್ನು ಅರಣ್ಯಾಧಿಕಾರಿಗಳಿಗೆ ನೀಡುತ್ತೇವೆ ಎಂದಿದ್ದಾರೆ.

 

Share Information
Advertisement
Click to comment

You must be logged in to post a comment Login

Leave a Reply