LATEST NEWS
ಟಿಕ್ ಟಾಕ್ ಡಾನ್ ಅಜ್ಜಿ ಇನ್ನು ನೆನಪು ಮಾತ್ರ…..!!

ಮಂಗಳೂರು : ಸಾಮಾಜಿಕ ಜಾಲತಾಣಗಳಲ್ಲಿ ಟಿಕ್ ಟಾಕ್ ವಿಡಿಯೋ ಗಳ ಮೂಲಕ ಮನೆ ಮಾತಾಗಿದ್ದ ಟಿಕ್ ಟಾಕ್ ಕಮಲಜ್ಜಿ ನಿನ್ನೆ ನಿಧನರಾಗಿದ್ದಾರೆ. ಟಿಕ್ ಟಾಕ್ ನ ಹಾಸ್ಯ ವಿಡಿಯೋಗಳಲ್ಲಿ ಕಾಣಿಸಿಕೊಂಡು ಅಪಾರ ಅಭಿಮಾನಿ ವರ್ಗವನ್ನು ಪಡೆದಿದ್ದರು.
ಅನಂತಾಡಿ ಗ್ರಾಮದ ಮಾಮೇಶ್ವರ ಸಂಕೇಶ ನಿವಾಸಿ ಕಮಲ(85) ಅವರಿಗೆ ಕಳೆದ ಒಂದುವಾರದಿಂದ ಅನಾರೋಗ್ಯ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಸಂಜೆ ನಿಧನರಾಗಿದ್ದಾರೆ. ಟಿಕ್ ಟಾಕ್ ಸ್ಟಾರ್ ಧನರಾಜ್ ಜೊತೆ ಕಮಲಜ್ಜಿ 50ಕ್ಕೂ ಅಧಿಕ ವಿಡಿಯೋಗಳಲ್ಲಿ ಕಾಣಿಸಿಕೊಂಡಿದ್ದು, ಇವರ ಕುಟುಂಬವೇ ಟಿಕ್ ಟಾಕ್ ಫ್ಯಾಮಿಲಿ ಎಂದು ಹೆಸರು ಪಡೆದಿತ್ತು.

ತಮ್ಮ ಇಳಿವಯಸ್ಸಿನಲ್ಲೂ ಇವರು ಟಿಕ್ ಟಾಕ್ ವಿಡಿಯೋಗಳಲ್ಲಿ ತೋರುತ್ತಿದ್ದ ಅಭಿನಯ, ಮಾತಿನ ವೇಗ, ಮನೆಮಂದಿಯ ಜೊತೆ ಬೆರೆಯುತ್ತಿದ್ದ ದೃಶ್ಯಾವಳಿಗಳಿಂದಾಗಿ ತಮ್ಮದೇ ಆದ ಅಭಿಮಾನಿ ವರ್ಗವನ್ನು ಅವರು ಪಡೆದಿದ್ದರು. ಪ್ರಸೂತಿ ತಜ್ಞೆಯಾಗಿದ್ದ ಇವರು ಪರೋಪಕಾರ ಮನಸ್ಸಿನವರಾಗಿದ್ದರು.