Connect with us

BANTWAL

ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಲಾರಿ

ಮರದ ದಿಮ್ಮಿಗಳನ್ನು ಹೇರಿಕೊಂಡು ಹೋಗುತ್ತಿದ್ದ ಲಾರಿ

ಬಂಟ್ವಾಳ ಜೂ 5: ಮರದ ದಿಮ್ಮಿಗಳನ್ನು ಹೇರಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಗಳಿಗೆ ಡಿಕ್ಕಿಯಾಗಿ ಬಳಿಕ ರಸ್ತೆಯಿಂದ ಬದಿಗೆ ಉರುಳಿ ಬಿದ್ದ ಘಟನೆ ಬಂಟ್ವಾಳ ಟ್ರಾಫಿಕ್ ಪೋಲೀಸ್ ಠಾಣಾ ವ್ಯಾಪ್ತಿಯ ಮೆಲ್ಕಾರ್ ಸಮೀಪದ ಮಾರ್ನಬೈಲು ಜಂಕ್ಸ್ ನ್ ನಲ್ಲಿ ಇಂದು ಮುಂಜಾನೆ ವೇಳೆ ನಡೆದಿದೆ.

ಘಟನೆಯಲ್ಲಿ ಯಾವುದೇ ಪ್ರಾಣ ಅಪಾಯ ಸಂಭವಿಸದೆ ಲಾರಿ ಮಾತ್ರ ಜಖಂ ಗೊಂಡಿದೆ, ಮೂರಕ್ಕೂ ಅಧಿಕ ವಿದ್ಯುತ್ ಕಂಬಗಳು ರಸ್ತೆಗೆ ಉರುಳಿ ಬಿದ್ದಿದೆ. ವಿದ್ಯುತ್ ತಂತಿಗಳು ಕಡಿದುಹೋಗಿ ಅಪಾರ ನಷ್ಟ ಸಂಭವಿಸಿದ್ದು, ಈ ಭಾಗದ ಜನರಿಗೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.


ಮೆಸ್ಕಾಂ ಹೊಸ ವಿದ್ಯುತ್ ಕಂಬಗಳನ್ನು ಹಾಕಿದ ಬಳಿಕವೇ ಈ ಭಾಗದ ಜನರಿಗೆ ವಿದ್ಯುತ್ ಸಂಪರ್ಕ ಸಾಧ್ಯ ಎಂದು ಹೇಳಲಾಗಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಠಾಣಾ ಎಸ್. ಐ.ರಾಜೇಶ್ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Facebook Comments

comments