LATEST NEWS
ಕಾರ್ಕಳ : ನಿಯಂತ್ರಣ ತಪ್ಪಿದ ಟಿಪ್ಪರ್, ವಿದ್ಯುತ್ ಕಂಬಕ್ಕೆ ಗುದ್ದಿ ಹಾನಿ..!

ಟಿಪ್ಪರ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಕಾರ್ಕಳದ ಕಣಜಾರಿನಲ್ಲಿ ಶುಕ್ರವಾರ ಸಂಭವಿಸಿದೆ.
ಕಾರ್ಕಳ : ಟಿಪ್ಪರ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಕಾರ್ಕಳದ ಕಣಜಾರಿನಲ್ಲಿ ಶುಕ್ರವಾರ ಸಂಭವಿಸಿದೆ.

ಬೈಲೂರಿನಿಂದ ಪಳ್ಳಿ ಕಡೆಗೆ ಸಾಗುತ್ತಿದ್ದ ಕಲ್ಲು ತುಂಬಿದ ಟಿಪ್ಪರ್ ಲಾರಿ ಆ್ಯಕ್ಸಿಲ್ ತುಂಡಾದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಕಣಜಾರು ಪೇಟೆಯ ಜ್ಯೋತಿ ಯುವಕ ಮಂಡಲದ ಮುಂಭಾಗದಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಅದೃಷ್ಟವಶಾತ್ ಅಪಘಾತದಿಂದ ಯಾವುದೇ ಅಪಾಯ ಸಂಭವಿಸಿಲ್ಲ. ಡಿಕ್ಕಿಯ ಪರಿಣಾಮಕ್ಕೆ ವಿದ್ಯುತ್ ಕಂಬ ಮುರಿದು ಹಾನಿಯಾಗಿದ್ದು ಮೆಸ್ಕಾಂ ಸಿಬ್ಬಂದಿ ಆ ಲೈನ್‌ನ ವಿದ್ಯುತ್ ಸ್ಥಗಿತಗೊಳಿಸಿ ದುರಸ್ಥಿ ಕಾರ್ಯ ಆರಂಭಿಸಿದ್ದಾರೆ.