Connect with us

LATEST NEWS

ಟಿಪ್ಪರ್ ಲಾರಿಗೆ ಸಿಲುಕಿದ ಸ್ಯಾಂಟ್ರೋ ಕಾರನ್ನು ಎಳೆದೊಯ್ದ ಚಾಲಕ…ವಿಡಿಯೋ ವೈರಲ್

Share Information

ಉಡುಪಿ ಜುಲೈ 17: ಟಿಪ್ಪರ್ ಲಾರಿಯೊಂದರ ಡಂಪರ್ ಗೆ ಸ್ಯಾಂಟ್ರೋ ಕಾರು ಸಿಲುಕಿದ ಘಟನೆ ಉಡುಪಿಯಲ್ಲಿ ನಡೆದಿದ್ದು, ಇದೀಗ ಘಟನೆಯ ಭಯಾನಕ ವಿಡಿಯೋ ವೈರಲ್ ಆಗಿದೆ.


ಸಾಗರದಿಂದ ಮಂಗಳೂರು ಕಡೆ ಹೋಗುತ್ತಿದ್ದ ಸ್ಯಾಂಟ್ರೋ ಕಾರ್ ಬೆಳ್ಮಣ್ಣಿನಿಂದ ಬೈಕಂಪಾಡಿ ಪ್ರದೇಶಕ್ಕೆ ಹೋಗುತ್ತಿದ್ದ ಟಿಪ್ಪರ್ ನಡುವೆ ಅಪಘಾತವಾಗಿದೆ. ಈ ವೇಳೆ ಹೆದರಿಕೆಯಿಂದ ಟಿಪ್ಪರ್ ಚಾಲಕ ಲಾರಿಯನ್ನು ವೇಗವಾಗಿ ಚಲಾಯಿಸಿದ್ದಾನೆ. ಆದರೆ ಟಿಪ್ಪರ್ ನ ಹಿಂಬದಿಗೆ ಕಾರು ಸಿಲುಕಿರುವ ವಿಚಾರ ಚಾಲಕನಿಗೆ ಗೊತ್ತಿಲ್ಲ, ಈ ನಡುವೆ ಟಿಪ್ಪರನ್ನು ಹಿಂಬಾಲಿಸಿಕೊಂಡು ಬಂದ ಸಾರ್ವಜನಿಕರು ಟಿಪ್ಪರ್ ಚಾಲಕನಿಗೆ ಬೈದು ನಿಲ್ಲಿಸಿದ ಸಾರ್ವಜನಿಕರು. ಬಳಿಕ ಟಿಪ್ಪರನ್ನು ಪಡುಬಿದ್ರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಘಟನೆಯಲ್ಲಿ ಕಾರಿನಲ್ಲಿದ್ದ ಓರ್ವ ಮಹಿಳೆ ಹಾಗೂ ಇಬ್ಬರು ಪುರುಷರಿಗೆ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.


Share Information
Advertisement
Click to comment

You must be logged in to post a comment Login

Leave a Reply