LATEST NEWS
ಉಪ್ಪೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಟಿಪ್ಪರ್ ಪಲ್ಟಿ ಇಬ್ಬರ ಸಾವು
ಉಪ್ಪೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಟಿಪ್ಪರ್ ಪಲ್ಟಿ ಇಬ್ಬರ ಸಾವು
ಉಡುಪಿ ಜೂನ್ 21 : ಬ್ರಹ್ಮಾವರ ಸಮೀಪದ ಉಪ್ಪೂರು ರಾಷ್ಟ್ರೀಯ ಹೆದ್ದಾರಿ ಬಳಿ ಟಿಪ್ಪರ್ ಒಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದ ಪಲ್ಟಿಯಾದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ.
ಮೃತರನ್ನು ಬ್ರಹ್ಮಾವರ ನಿವಾಸಿ ನಾಗರಾಜ್ ಹಾಗೂ ಭಟ್ಕಳದ ಕುಮಾರ್ ಎಂದು ಗುರತಿಸಲಾಗಿದೆ. ಅಪಘಾತದಲ್ಲಿ ಮತ್ತೊರ್ವ ಗಂಭೀರವಾಗಿ ಗಾಯಗೊಂಡಿದ್ದು, ಮಣಿಪಾಲದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬ್ರಹ್ಮಾವರದಿಂದ ಮಣಿಪಾಲಕ್ಕೆ ಕೆಲಸಕ್ಕೆಂದು ತೆರಳುತ್ತಿದ್ದ ಟಿಪ್ಪರ್ ಮಳೆಯ ಹಿನ್ನಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಹೊಡೆದಿದೆ ಎಂದು ಹೇಳಲಾಗಿದೆ. ಡಿವೈಡರ್ ಗೆ ಡಿಕ್ಕಿ ಹೊಡೆದ ಹಿನ್ನಲೆ ಟಿಪ್ಪರ್ ಪಲ್ಟಿಹೊಡೆದಿದೆ. ಇದರಿಂದಾಗಿ ಟಿಪ್ಪರ್ ಚಾಲಕ ನಾಗರಾಜ್ ಸ್ಥಳದಲ್ಲೇ ಸಾವನಪ್ಪಿದ್ದು, ಮತ್ತೊರ್ವ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನೊಬ್ಬ ಗಾಯಾಳು ಟಿಪ್ಪರ್ ನಡಿಯಲ್ಲಿ ಸಿಲುಕಿಕೊಂಡಿದ್ದರು. ಅವರನ್ನು ತೆಗೆಯಲು ಹರಸಾಹಸ ಪಡಬೇಕಾಯಿತು. ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವಿಧಾನಪರಿಷತ್ ಸದಸ್ಯ ಕೋಟ ಶ್ರಿನಿವಾಸ ಪೂಜಾರಿ ಅವರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲು ಸಹಕಾರ ನೀಡಿದರು.