LATEST NEWS
ಮಂಗಳೂರಿನಲ್ಲಿ ಟಿಪ್ಪು ಜಯಂತಿ ವಿರೋಧಿಸಿ ಅರೆಬೆತ್ತಲೆ ಮೆರವಣಿಗೆ
ಮಂಗಳೂರಿನಲ್ಲಿ ಟಿಪ್ಪು ಜಯಂತಿ ವಿರೋಧಿಸಿ ಅರೆಬೆತ್ತಲೆ ಮೆರವಣಿಗೆ
ಮಂಗಳೂರು ನವೆಂಬರ್ 10: ಟಿಪ್ಪು ಜಯಂತಿ ಕಾರ್ಯಕ್ರಮಕ್ಕೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಭಾರಿ ವಿರೋಧ ವ್ಯಕ್ತವಾಗಿದ್ದು, ಬಿಜೆಪಿ ಮುಖಂಡ ಪ್ಲಾಂಕಿನ್ ಮೊಂತೆರೊ ಅವರು ಟಿಪ್ಪು ಜಯಂತಿ ವಿರೋಧಿಸಿ ಅರಬೆತ್ತಲೆ ಪ್ರತಿಭಟನೆ ನಡೆಸಿದ್ದಾರೆ.
ರಾಷ್ಟ್ರೀಯವಾದಿ ಕ್ರೈಸ್ತ ಸಂಘಟನೆಯ ಮುಖಂಡ ಹಾಗೂ ಬಿಜೆಪಿ ನಾಯಕ ಫ್ರಾಂಕ್ಲಿನ್ ಮೊಂತೇರೋ ಏಕಾಂಗಿಯಾಗಿ ಟಿಪ್ಪು ಜಯಂತಿ ವಿರೋಧಿಸಿ ಅರೆಬೆತ್ತಲೆ ಪ್ರತಿಭಟನೆ ನಡೆಸಿದ್ದಾರೆ. ಇಂದು ರಾಜ್ಯ ಸರಕಾರದ ಆದೇಶದಂತೆ ದಕ್ಷಿಣಕನ್ನಡ ಜಿಲ್ಲಾಡಳಿತ ಜಿಲ್ಲಾಪಂಚಾಯತ್ ಸಭಾಂಗಣದಲ್ಲಿ ಟಿಪ್ಪು ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು.
ಬಿಜೆಪಿ ಟಿಪ್ಪು ಜಯಂತಿ ವಿರೋಧಿಸಿ ಪ್ರತಿಭಟನೆ ನಡೆಸಿದ್ದು, ಬಿಜೆಪಿ ಮುಖಂಡ ಫ್ರಾಂಕ್ಲಿನ್ ಮೊಂತೆರೋ ಕಪ್ಪು ಬಾವುಟ ತೋರಿಸಿ ಟಿಪ್ಪು ಜಯಂತಿಗೆ, ಸಿದ್ಧರಾಮಯ್ಯ, ಪರಮೇಶ್ವರ್ಗೆ ಧಿಕ್ಕಾರ ಕೂಗಿ ಪ್ರತಿಭಟನೆ ನಡೆಸಿದ್ದಾರೆ. ಜಿಲ್ಲಾ ಪಂಚಾಯತ್ ಸಭಾಂಗಣ ಪ್ರವೇಶಕ್ಕೆ ಅಣಿಯಾಗುತ್ತಿದ್ದಂತೆ ಪ್ರತಿಭಟನಾಕಾರರನ್ನು ಪೊಲೀಸರು ತಡೆದಿದ್ದಾರೆ.
ಜಿಲ್ಲಾ ಪಂಚಾಯತ್ ಆವರಣದಲ್ಲಿ ಅಂಗಿ ಬಿಚ್ಚಿ , ಟಿಪ್ಪುಗೆ ಧಿಕ್ಕಾರದ ಕೂಗಿದ ಫ್ರಾಂಕ್ಲಿನ್ ಮೊಂತೆರೋರನ್ನು ಪೊಲೀಸರು ಬಂಧಿಸಿ ಕರೆದೊಯ್ದರು.