LATEST NEWS
ಟಿಪ್ಪು ಜಯಂತಿ ಆಮಂತ್ರಣ ಪತ್ರಿಕೆಯಲ್ಲಿ ಹೆಸರು ವಿವಾದ, ಸಂಸದೆ ಶೋಭಾ ಗರಂ

ಟಿಪ್ಪು ಜಯಂತಿ ಆಮಂತ್ರಣ ಪತ್ರಿಕೆಯಲ್ಲಿ ಹೆಸರು ವಿವಾದ, ಸಂಸದೆ ಶೋಭಾ ಗರಂ
ಉಡುಪಿ ಅಕ್ಟೋಬರ್ 21: ಟಿಪ್ಪು ಜಯಂತಿ ಆಚರಣೆ ಆಮಂತ್ರಣ ಪತ್ರಿಕೆ ಹೊಸ ವಿವಾದ ಹುಟ್ಟುಹಾಕಿದೆ.
ಈಗಾಗಲೇ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ ತನ್ನ ಹೆಸರು ನಮೂದಿಸುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.

ಇದೀಗ ಉಡುಪಿ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಕೂಡ ಟಿಪ್ಪು ಜಯಂತಿ ಆಮಂತ್ರಣ ಪತ್ರಿಕೆಯಲ್ಲಿ ತನ್ನ ಹೆಸರು ಸೇರಿಸದಂತೆ ಎರಡು ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಂಸದೆ ಶೋಭಾ ಕರಂದ್ಲಾಜೆ ರಾಜ್ಯ ಸರ್ಕಾರ ಟಿಪ್ಪು ಜಯಂತಿ ಆಚರಿಸಲು ಉತ್ಸುಕವಾಗಿದೆ.
ಆದರೆ ಆಹ್ವಾನ ಪತ್ರಿಕೆಯಲ್ಲಿ ತಮ್ಮ ಹೆಸರನ್ನು ಹಾಕಬಾರದು ಎಂದು ಎರಡು ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿರುವುದಾಗಿ ತಿಳಿಸಿದ್ದಾರೆ.
ರಾಜ್ಯ ಸರಕಾರದ ಟಿಪ್ಪು ಜಯಂತಿ ಆಚರಣೆಗೆ ಪ್ರತಿಪಕ್ಷ ಬಿಜೆಪಿ ಈಗಾಗಲೇ ವಿರೋಧ ವ್ಯಕ್ತಪಡಿಸಿದೆ.