Connect with us

    LATEST NEWS

    ತೀರ್ಥಹಳ್ಳಿ: ಲಾಡ್ಜ್ ನಲ್ಲಿ ರೂಂ ಪಡೆದ ಹಿರಿಯಡ್ಕ ಮೂಲದ ವ್ಯಕ್ತಿ ಆತ್ಮಹತ್ಯೆ…!!

    ತೀರ್ಥಹಳ್ಳಿ: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಲಾಡ್ಜ್ ವೊಂದರಲ್ಲಿ ವ್ಯಕ್ತಿಯೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ಉಡುಪಿ ಮೂಲದ ಪ್ರಸನ್ನ ಶೆಟ್ಟಿ(45) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ. ತೀರ್ಥಹಳ್ಳಿಯ ಬಾಳೆಬೈಲಿನಲ್ಲಿರುವ ಲಾಡ್ಜ್ ವೊಂದರಲ್ಲಿ ಎರಡು ದಿನದಿಂದ ರೂಮ್ ಬಾಡಿಗೆ ಪಡೆದಿದ್ದ ಪ್ರಸನ್ನ ಶೆಟ್ಟಿ ಕೊಠಡಿಯ ಬಾಗಿಲು ತೆರೆಯದಿದ್ದಾಗ ರೂಮ್ ಸಿಬ್ಬಂದಿ ಪರಿಶೀಲಿಸಿದ್ದಾರೆ. ಈ ವೇಳೆ ಪ್ರಕರಣ ಬೆಳಕಿಗೆ ಬಂದಿದೆ.

    ವ್ಯವಹಾರದಲ್ಲಿ ನಷ್ಟ ಅನುಭವಿಸಿದ ಕಾರಣ ಪ್ರಸನ್ನ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಘಟನಾ ಸ್ಥಳಕ್ಕೆ ತೀರ್ಥಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪ್ರಕರಣ ದಾಖಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply