Connect with us

    KARNATAKA

    ಸಿಎಂ ಬದಲಾವಣೆ ವಿಚಾರ – ಸಂಜೆಯೊಳಗೆ ಸಂದೇಶ ಬರಲಿದೆ – ಬಿಎಸ್ ವೈ

    ಬೆಳಗಾವಿ ಜುಲೈ 25: ರಾಜ್ಯ ರಾಜಕೀಯದಲ್ಲಿ ಸಿಎಂ ಬದಲಾವಣೆ ಕುರಿತಂತೆ ಇಂದು ಸಂಜೆಯೊಳಗೆ ಹೈಕಮಾಂಡ್‌ನಿಂದ ಸಂದೇಶ ಬರಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತಿಳಿಸಿದ್ದಾರೆ.


    ಪ್ರವಾಹಪೀಡಿತ ಪ್ರದೇಶಗಳ ವೀಕ್ಷಣೆಗೆಂದು ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಭಾನುವಾರ ಬಂದಿಳಿದ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಸಂದೇಶ ಬಂದ ತಕ್ಷಣ ನಿಮಗೂ ಗೊತ್ತಾಗಲಿದೆ ಎಂದರು.

    ಸ್ವಾಮೀಜಿ ಸಮಾರಂಭ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಯಾವುದೇ ಸಭೆ ಮಾಡುವ ಅವಶ್ಯಕತೆ ಇಲ್ಲ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಬಗ್ಗೆ ವಿಶ್ವಾಸವಿದೆ ಎಂದರು. ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಎಲ್ಲಾ ತೀರ್ಮಾನವನ್ನೂ ಮಾಡುವುದು ಹೈಕಮಾಂಡ್. ಹೈಕಮಾಂಡ್ ಏನು ತೀರ್ಮಾನ ಕೈಗೊಳ್ಳಲಿದೆ ಎನ್ನುವುದನ್ನು ಕಾದು ನೋಡೋಣ ಎಂದು ಹೇಳಿದರು.

    Share Information
    Advertisement
    Click to comment

    You must be logged in to post a comment Login

    Leave a Reply