LATEST NEWS
ಇಡೀ ಪ್ರಪಂಚಕ್ಕೆ ಮೋದಿ ವಾರ್ನಿಂಗ್ – ಉಗ್ರರಿಗೆ ಕಲ್ಪನೆಗೂ ಮೀರಿದ ರೀತಿಯಲ್ಲಿ ಶಿಕ್ಷೆ

ಪಾಟ್ನಾ ಎಪ್ರಿಲ್ 24: ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ನಡೆದ ದಾಳಿ ಬಳಿಕ ಮೊದಲ ಬಾರಿಗೆ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಂಡಿರುವ ಪ್ರಧಾನಿ ಮೋದಿ ಇಡೀ ಪ್ರಪಂಚಕ್ಕೆ ಎಚ್ಚರಿಕೆ ನೀಡಿದ್ದಾರೆ. ಪಹಲ್ಗಾಮ್‌ನಲ್ಲಿ ದಾಳಿ ಮಾಡಿದವರು ಮತ್ತು ಸಂಚು ರೂಪಿಸಿದವರ ಕಲ್ಪನೆಗೂ ಮೀರಿದ ರೀತಿಯಲ್ಲಿ ಶಿಕ್ಷೆ ಸಿಗಲಿದೆ ಎಂದು ಮೋದಿ ಗುಡುಗಿದ್ದಾರೆ.
ಬಿಹಾರದ ಮಧುಬನಿಯಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ ಮತ್ತು ದೀನ್ ದಯಾಳ್ ಉಪಾಧ್ಯಾಯ ಅಂತ್ಯೋದಯ ಯೋಜನೆ–ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ (DAY–NRLM) ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಉಗ್ರರಿಗೆ ಎಚ್ಚರಿಕೆ ನೀಡಿದರು.

ಪ್ರಧಾನಿ ನರೇಂದ್ರ ಮೋದಿ ದೇಶದಲ್ಲಿ ಸಾರ್ವಜನಿಕ ಸಭೆಗಳಲ್ಲಿ ಹೆಚ್ಚಾಗಿ ಹಿಂದಿಯಲ್ಲೇ ಮಾತನಾಡುತ್ತಾರೆ. ಆದರೆ ಇಂದು ಇಂಗ್ಲಿಷ್ ನಲ್ಲಿ ಭಾಷಣ ಪ್ರಾರಂಭಿಸಿದ ಪ್ರಧಾನಿ ಇಂದು ಬಿಹಾರದ ನೆಲದಲ್ಲಿ ನಿಂತು ನಾನು ಇಡೀ ಜಗತ್ತಿಗೆ ಹೇಳುತ್ತೇನೆ. ಭಾರತವು ಪ್ರತಿಯೊಬ್ಬ ಭಯೋತ್ಪಾದಕ ಮತ್ತು ಅವರ ಬೆಂಬಲಿಗರನ್ನು ಗುರುತಿಸುತ್ತದೆ ಪತ್ತೆಹಚ್ಚುತ್ತದೆ ಮತ್ತು ಶಿಕ್ಷಿಸುತ್ತದೆ ಎಂದು ಹೇಳಿದರು. ಈ ಸಂಕಲ್ಪದಲ್ಲಿ ಇಡೀ ರಾಷ್ಟ್ರವು ಒಂದಾಗಿದೆ. ಮಾನವೀಯತೆಯನ್ನು ನಂಬುವ ಪ್ರತಿಯೊಬ್ಬರೂ ನಮ್ಮೊಂದಿಗಿದ್ದಾರೆ. ವಿವಿಧ ದೇಶಗಳ ಜನರಿಗೆ ಮತ್ತು ಅವರ ನಾಯಕರು ನಮ್ಮೊಂದಿಗೆ ನಿಂತಿದ್ದಕ್ಕಾಗಿ ನಾನು ಧನ್ಯವಾದ ಹೇಳುತ್ತೇನೆ ಎಂದರು