Connect with us

    DAKSHINA KANNADA

    CM ಸಿದ್ದರಾಮಯ್ಯ, DCM ಡಿ. ಕೆ ಶಿವಕುಮಾರ್‌ ಇಬ್ಬರಿಗೂ ಇವತ್ತಿನ ದಿನ ಇಂಪಾರ್ಟೆಂಟ್..!!

    ಬೆಂಗಳೂರು : ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಇವರಿಬ್ಬರಿಗೂ ಇವತ್ತಿನ ದಿನ ಬಹಳ ಮುಖ್ಯವಾದುದಾಗಿದೆ. ಇಬ್ಬರ ವಿರುದ್ದ ಎರಡು ಪ್ರತ್ಯೇಕ ಪ್ರಕರಣಗಳ ಭವಿಷ್ಯ ಇಂದು ಗುರುವಾರ ನಿರ್ಧಾರವಾಗಲಿದ್ದು, ರಾಜ್ಯ ರಾಜಕೀಯದಲ್ಲಿ ಭಾರಿ ಕುತೂಹಲಕ್ಕೆ ಕಾರಣವಾಗಿದೆ.

     

    ರಾಜ್ಯಪಾಲ ಥಾವರಚಂದ್ ಗೆಹ್ಲೊಟ್ ಅವರು ಮುಡಾ ಹಗರಣದ ಬಗ್ಗೆ ಮುಖ್ಯಮಂತ್ರಿ ವಿರುದ್ಧ ತನಿಖೆಗೆ ಅನುಮತಿ ನೀಡಿದ ಕ್ರಮ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಆದ್ರೆ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಅಭಯ ನೀಡಿದೆ. ಜೊತೆಗೆ ರಾಜ್ಯಪಾಲರ ವಿರುದ್ಧ ಸಂಘರ್ಷಕ್ಕಿಳಿದ ಕಾಂಗ್ರೆಸ್ ಸರ್ಕಾರ ಕಾನೂನು ಹೋರಾಟಕ್ಕೂ ಮುಂದಾಗಿದೆ. ರಾಜಭವನದ ವಿರುದ್ಧ ವಿವಿಧ ಹಂತದ ಹೋರಾಟದ ಸರಣಿಯನ್ನು ಸರ್ಕಾರ ಮತ್ತು ಕಾಂಗ್ರೆಸ್ ಪಕ್ಷ ಸಂಘಟಿಸಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆಯಲ್ಲಿ ಆಗಿರುವ ಅಕ್ರಮಕ್ಕೆ ಸಂಬಂಧಿಸಿ ತನಿಖೆಗೆ ಅನುಮತಿ ನೀಡಿದ ರಾಜ್ಯಪಾಲರ ಆದೇಶವನ್ನು ವಜಾಗೊಳಿಸುವಂತೆ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿ ಕುರಿತು ತೀರ್ಮಾನ ಇಂದು ಪ್ರಕಟವಾಗಲಿದೆ.
    ಅತ್ತ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವಿರುದ್ಧ ಸಿಬಿಐ ಸಲ್ಲಿಸಿರುವ ಅರ್ಜಿಯ ವಿಚಾರಣೆ ಪೂರ್ಣಗೊಂಡಿದ್ದು, ಕಾಯ್ದಿರಿಸಿದ ತೀರ್ಪು ಕೂಡ ಇಂದೇ ಗುರುವಾರ ಪ್ರಕಟವಾಗಲಿದೆ. ಆದಾಯ ಮೀರಿ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ತನಿಖೆ ನಡೆಸಲು ಈ ಹಿಂದಿನ ಬಿಜೆಪಿ ನೇತೃತ್ವದ ಸರ್ಕಾರವು ಸಿಬಿಐಗೆ ಅನುಮತಿ ನೀಡಿದ್ದ ಆದೇಶವನ್ನು; ಕಾಂಗ್ರೆಸ್ ನೇತೃತ್ವದ ಈಗಿನ ರಾಜ್ಯ ಸರ್ಕಾರ ಹಿಂಪಡೆದಿರುವುದನ್ನು ಪ್ರಶ್ನಿಸಿ ದಾಖಲಾಗಿರುವ ಎರಡು ಪ್ರತ್ಯೇಕ ರಿಟ್‌ ಅರ್ಜಿಗಳ ವಿಚಾರಣೆ ಮುಕ್ತಾಯಗೊಳಿಸಿರುವ ಹೈಕೋರ್ಟ್‌ನ ವಿಭಾಗೀಯ ನ್ಯಾಯಪೀಠ ಕಾಯ್ದಿರಿಸಿರುವ ತೀರ್ಪನ್ನು ಇಂದು ಪ್ರಕಟಿಸಲಿದೆ. ಸುಭದ್ರ ಸರ್ಕಾರಕ್ಕೆ ಹೆಗಲುಕೊಟ್ಟಿರುವ ಇಬ್ಬರು ನಾಯಕರ ಕಾನೂನು ಸಮರದ ‘ನ್ಯಾಯ’ ಪರೀಕ್ಷೆಯ ರಿಸಲ್ಟ್ ಇಂದು ಪ್ರಕಟವಾ್ಗಲಿದೆ. ಆದ್ದರಿಂದ ಆಡಳಿತಾರೂಢ ಪಕ್ಷಕ್ಕೆ ಇಂದು ನಿರ್ಣಾಯಕ ದಿನವಾಗಿದೆ. ಆದ್ದರಿಂದ ಗುರುವಾರದ ಗುರುಬಲ ಯಾರ ಪರವಾಗಿದೆ ಕಾದು ನೋಡಬೇಕಿದೆ.

    Share Information
    Advertisement
    Click to comment

    You must be logged in to post a comment Login

    Leave a Reply