Connect with us

    LATEST NEWS

    ಒಂದೂವರೆ ವರ್ಷದ ಪುಟ್ಟ ಮಗುವಿನ ಜೀವ ತೆಗೆದ ಚಕ್ಕುಲಿ

    ತಿರುವನಂತಪುರಂ ಡಿಸೆಂಬರ್ 01: ಚಕ್ಕುಲಿ ಗಂಟಲಲ್ಲಿ ಸಿಕ್ಕಿಹಾಕಿಕೊಂಡ ಪರಿಣಾಮ ಒಂದೂವರೆ ವರ್ಷದ ಮಗುವೊಂದು ಸಾವನಪ್ಪಿದ ಘಟನೆ ಕೇರಳದ ಅಲಪುಳದಲ್ಲಿ ನಡೆದಿದೆ.


    ಮೃತ ಬಾಲಕನನ್ನು ಒಂದೂವರೆ ವರ್ಷದ ವೈಷ್ಣವ್ ಎಂದು ಗುರುತಿಸಲಾಗಿದೆ. ಈ ಘಟನೆ ಇಂದು ಬೆಳಗ್ಗೆ 9.30ರ ಸುಮಾರಿಗೆ ನಡೆದಿದೆ. ಬಾಲಕ ಚಕ್ಕುಲಿಯನು ತಿಂದುಕೊಂಡು ತನ್ನ ಪಾಡಿಗೆ ಆಟವಾಡುತ್ತಿದ್ದನು. ಈ ವೇಳೆ ಏಕಾಏಕಿ ಚಕ್ಕುಲಿಯನ್ನು ನುಂಗಿಬಿಟ್ಟಿದ್ದಾನೆ. ಪರಿಣಾಮ ಚಕ್ಕುಲಿ ಗಂಟಲಲ್ಲಿ ಸಿಲುಕಿಕೊಂಡು ಆತನಿಗೆ ಉಸಿರಾಡಲು ಸಾಧ್ಯವಾಗುತ್ತಿರಲಿಲ್ಲ. ಕೂಡಲೇ ಆತನನ್ನು ಕೊಲ್ಲಂನಲ್ಲಿರುವ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೆ ವೈಷ್ಣವ್‍ನನ್ನು ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ. ಘಟನೆ ಸಂದರ್ಭದಲ್ಲಿ ಮಗು ಹಾಗೂ ಆತನ ತಾಯಿ ದಿವ್ಯಾ ಮಾತ್ರ ಮನೆಯಲ್ಲಿದ್ದರು. ಮಗುವಿನ ತಂದೆ ವೃತ್ತಿಯಲ್ಲಿ ಕಾರ್ಪೆಂಟರ್ ಆಗಿದ್ದು, ಪಾಲಕ್ಕಾಡ್‍ನಲ್ಲಿರುವ ತಮ್ಮ ಸಂಬಂಧಿಕರ ಮನೆಗೆ ಕೆಲಸಕ್ಕೆ ತೆರಳಿದ್ದರು.

     

    Share Information
    Advertisement
    Click to comment

    You must be logged in to post a comment Login

    Leave a Reply