LATEST NEWS
ಸ್ಥಳೀಯ ವಾಹನಗಳಿಗೆ ಟೋಲ್ ಸಂಗ್ರಹ ವಿರೋಧಿಸಿ ಸಾಸ್ತಾನ ಬಂದ್
ಸ್ಥಳೀಯ ವಾಹನಗಳಿಗೆ ಟೋಲ್ ಸಂಗ್ರಹ ವಿರೋಧಿಸಿ ಸಾಸ್ತಾನ ಬಂದ್
ಉಡುಪಿ ಡಿಸೆಂಬರ್ 7 ರಾಷ್ಟ್ರೀಯ ಹೆದ್ದಾರಿ 66 ರ ಸಾಸ್ತಾನದಲ್ಲಿ ಸ್ಥಳೀಯ ವಾಹನಗಳಿಗೆ ಟೋಲ್ ಸಂಗ್ರಹ ವಿರೋಧಿಸಿ ಇಂದು ಸಾಸ್ತಾನ ಟೋಲ್ ಗೇಟ್ ವ್ಯಾಪ್ತಿಯ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಲಾಯಿತು.
ಸಾಸ್ತಾನ ಟೋಲ್ ಗೇಟ್ ವ್ಯಾಪ್ತಿಯ 20 ಕಿಲೋ ಮೀಟರ್ ಅಂದರೆ ಮಾಬುಕಳದಿಂದ ಕೋಟ ಮಣೂರುವರೆೆಗೆ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲಾಗಿದೆ.
ಇಲ್ಲಿಯ ಸಾಸ್ತಾನದ ಗುಂಡ್ಮಿಯಲ್ಲಿರುವ ನವಯುಗ ಕಂಪೆನಿ ಟೋಲ್ ಗೇಟ್ ನಲ್ಲಿ ಸ್ಥಳಿೀಯ ವಾಹನಗಳಿಂದ ಟೋಲ್ ಸಂಗ್ರಹವನ್ನು ವಿರೋಧಿಸಿ ಹಲವು ಸಂಘಟನೆಗಳು ಈಗಾಗಲೇ ಹಲವು ಬಾರಿ ಪ್ರತಿಭಟನೆ ನಡೆಸಿದ್ದವು.
ಈ ಹಿನ್ನಲೆಯಲ್ಲಿ ಕಳೆದ 2 ವರ್ಷಗಳಿಂದ ಇಲ್ಲಿ ಸ್ಥಳೀಯ ವಾಹನಗಳಿಗೆ ಟೋಲ್ ಸಂಗ್ರಹ ನಿಲ್ಲಿಸಲಾಗಿತ್ತು. ಆದರೆ ಇತ್ತೀಚೆಗೆ ನವಯುಗ ಕಂಪೆನಿ ಸ್ಥಳೀಯರು ಟೋಲ್ ಸಂಗ್ರಹಿಸಲು ಬಿಡುತ್ತಿಲ್ಲ ಎಂದು ನ್ಯಾಯಾಲಯಕ್ಕೆ ಮೊರೆ ಹೋಗಿದ್ದರು.
ನ್ಯಾಯಾಲಯ ಟೋಲ್ ವಸೂಲಾತಿಗೆ ಆದೇಶ ನೀಡಿತ್ತು. ಈ ಹಿನ್ನಲೆಯಲ್ಲಿ ಪೊಲೀಸ್ ಬಂದೋಬಸ್ತ್ ನಲ್ಲಿ ಟೋಲ್ ಸಂಗ್ರಹ ಮಾಡಲಾಗಿತ್ತು. ಈ ಸಂದರ್ಭ ಶಾಂತಿಯುತವಾಗಿ ಪ್ರತಿಭಟನೆ ಮಾಡುತ್ತಿದ್ದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದರು.
ಈಗ ಮತ್ತೊಮ್ಮೆ ಹೋರಾಟಕ್ಕೆ ಸ್ಥಳೀಯರು ಮುಂದಾಗಿದ್ದು, ಇಂದು ಸಾಸ್ತಾನ ಟೋಲ್ ಗೇಟ್ ವ್ಯಾಪ್ತಿಯ 20 ಕಿಲೋ ಮೀಟರ್ ಪರಿಸರದಲ್ಲಿ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಲಾಯಿತು.