LATEST NEWS
ಪ್ರಧಾನಿ ನರೇಂದ್ರ ಮೋದಿ ನಾಳೆ ಮಂಗಳೂರಿಗೆ

ಪ್ರಧಾನಿ ನರೇಂದ್ರ ಮೋದಿ ನಾಳೆ ಮಂಗಳೂರಿಗೆ
ಮಂಗಳೂರು,ಡಿಸೆಂಬರ್ 17 : ಪ್ರಧಾನಿ ನರೇಂದ್ರ ಮೋದಿ ಲಕ್ಷ ದ್ವೀಪಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ನಾಳೆ ಸೊಮವಾರ ಮಂಗಳೂರಿಗೆ ಅಗಮಿಸಲಿದ್ದಾರೆ.
ನಾಳೆ ಸಂಜೆ ವಿಶೇಷ ವಿಮಾನದಲ್ಲಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿ, ಬಳಿಕ ನಗರದ ಸರ್ಕಿಟ್ ಹೌಸಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಡಿಸೆಂಬರ್ 19 ರಂದು ಬೆಳಗ್ಗೆ ಸುಮಾರು 7.30ಕ್ಕೆ ಮಂಗಳೂರಿನಿಂದ ಕೇಂದ್ರಾಡಳಿತ ಪ್ರದೇಶವಾದ ಲಕ್ಷದ್ವೀಪಕ್ಕೆ ವಿಶೇಷ ಸೇನಾ ಹೆಲಿಕಾಪ್ಟರ್ ಮೂಲಕ ಪ್ರಯಾಣ ಬೆಳೆಸಲಿದ್ದಾರೆ.
ಇತ್ತಿಚೆಗೆ ಓಖೀ ಚಂಡಮಾರುತದಿಂದ ಲಕ್ಷ ದ್ವೀಪದಲ್ಲಿ ಹಾನಿಗೊಳಗಾದ ಪ್ರದೇಶಗಳ ವೀಕ್ಷಣೆ ನಡೆಸಲಿದ್ದಾರೆ.
ಇದೇ ಸಂದರ್ಭದಲ್ಲಿ ಓಖೀ ಚಂಡಮಾರುತದ ಸಂತ್ರಸ್ತರನ್ನು ಪ್ರಧಾನಿ ಭೇಟಿ ಮಾಡಲಿದ್ದಾರೆ.
ಪ್ರಧಾನಿ ಮಂಗಳೂರು ಆಗಮಿಸುವುದನ್ನು ಸಂಸದ ನಳಿನ್ ಕುಮಾರ್ ಕಟೀಲ್ ಅವರು ಖಚಿತಪಡಿಸಿದ್ದಾರೆ.
ಒಂದು ವೇಳೆ ಪ್ರಧಾನಿ ಅವರು ಕಾರ್ಯಕ್ರಮಗಳ ಒತ್ತಡ ಹೆಚ್ಚಿದ್ದರೆ, ಸೊಮವಾರ ಸಂಜೆ ಬದಲು ಮಂಗಳವಾರ ಬೆಳಗ್ಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ, ಬಳಿಕ ಅಲ್ಲಿಂದಲೇ ನೇರವಾಗಿ ಲಕ್ಷ ದ್ವೀಪದತ್ತ ಅಧಿಕಾರಿಗಳೊಂದಿಗೆ ಪ್ರಯಾಣ ಬೆಳೆಸುವ ಸಾಧ್ಯತೆಗಳಿವೆ ಎಂದು ಬಿಜೆಪಿ ಪ್ರಮುಖರು ಮಾಹಿತಿ ನೀಡಿದ್ದಾರೆ.
ಪ್ರಧಾನಿ ಮಂಗಳೂರಿಗೆ ಆಗಮಿಸುವ ಹಿನ್ನೆಲೆಯಲ್ಲಿ ನಗರದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.