Connect with us

    LATEST NEWS

    ರಾಜ್ಯಸಭಾ ಸದಸ್ಯರಾಗಿ ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿದ ಡಿ. ವೀರೇಂದ್ರ ಹೆಗ್ಗಡೆ

    ಹೊಸದಿಲ್ಲಿ, ಜುಲೈ 21: ರಾಜ್ಯಸಭಾ ಸದಸ್ಯರಾಗಿ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರು ಇಂದು ರಾಜ್ಯಸಭೆಯಲ್ಲಿ ಪ್ರಮಾಣವಚನ ಸ್ವೀಕರಿಸಿದರು.

    ರಾಜ್ಯಸಭಾ ಸ್ಪೀಕರ್‌ ಹಾಗೂ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ಸಮ್ಮುಖದಲ್ಲಿ ನಡೆದ ಪ್ರಮಾಣವಚನದಲ್ಲಿ ಕನ್ನಡ ಭಾಷೆಯಲ್ಲಿ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಜು.6 ರಂದು ಡಾ.ಡಿ.ವೀರೆಂದ್ರ ಹೆಗ್ಗಡೆ, ಸಂಗೀತ ನಿರ್ದೇಶಕ ಇಳಯರಾಜ, ಕಥೆಗಾರ ವಿಜಯೇಂದ್ರ ಪ್ರಸಾದ್, ಅಥ್ಲೀಟ್ ಪಿ.ಟಿ.ಉಷಾ ಅವರನ್ನು ರಾಜ್ಯಸಭೆಗೆ ನಾಮ ನಿರ್ದೇಶನ ಮಾಡಲಾಗಿತ್ತು.

    ಇದಕ್ಕೂ ಮುಂಚೆ ಪ್ರಮಾಣ ವಚನ ಸ್ವೀಕರಿಸಲು ಸಂಸತ್ ಭವನಕ್ಕೆ ಆಗಮಿಸಿದ ಹೆಗ್ಗಡೆಯವರನ್ನು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಹಾಗೂ ಸಂಸದ ನಳಿನ್‌ ಕುಮಾರ್‌ ಕಟೀಲ್‌ ಸ್ವಾಗತಿಸಿ ಬರಮಾಡಿಕೊಂಡರು. ಈ ಸಂದರ್ಭ ಕೇಂದ್ರ ಸಚಿವರುಗಳಾದ ಪ್ರಹ್ಲಾದ್‌ ಜೋಷಿ, ಹಾಗೂ ಪಿಯೂಷ್‌ ಘೋಷಲ್‌ ಅಭಿನಂದಿಸಿದರು.

    ರಾಜ್ಯಸಭೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದ, ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಹಾರ್ದಿಕ ಅಭಿನಂದನೆಗಳು. ತಮ್ಮ ಜನಸೇವೆ ಸರಾಗವಾಗಿ ಸಾಗಲಿ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಶುಭ ಹಾರೈಸಿದರು.

    Share Information
    Advertisement
    Click to comment

    You must be logged in to post a comment Login

    Leave a Reply