Connect with us

    LATEST NEWS

    ರೌದ್ರ ಮಳೆಗೆ ಅಸ್ತವ್ಯಸ್ತವಾದ ಜನಜೀವನ , ಎನ್ ಡಿ ಆರ್ ಫ್ ನಿಂದ ರಕ್ಷಣಾ ಕಾರ್ಯ

    ಉಡುಪಿ : ಉಡುಪಿ ಜಿಲ್ಲೆಯಲ್ಲಿ ವಿಪರೀತ ಮಳೆಯಾಗುತ್ತಿದೆ. ಬ್ರಹ್ಮಾವರ ತಾಲೂಕಿನ ಸೀತಾನದಿ ವಿಪರೀತ ಮಟ್ಟ ತಲುಪಿದ್ದು ಕಿಂಡಿ ಅಣೆಕಟ್ಟಿನ ಮೇಲೆ ನೀರು ಹರಿಯುತ್ತಿದೆ. ಸುತ್ತಮುತ್ತಲಿನ ಮನೆ ಕೃಷಿ ಭೂಮಿ ಭತ್ತದ ಬೇಸಾಯದ ಗದ್ದೆಗಳಿಗೆ ನೀರು ನುಗ್ಗಿದೆ.

    ತಗ್ಗುಪ್ರದೇಶಗಳು ಸಂಪೂರ್ಣ ಜಲಾವೃತವಾಗಿದ್ದು ಮುಳುಗಡೆಯಾದ ಪ್ರದೇಶಗಳ ಜನರ ರಕ್ಷಣೆ ಮಾಡಲಾಗಿದೆ. ಸ್ಥಳೀಯ ನಾಡದೋಣಿ ಮೀನುಗಾರಿಕೆ ,ಮರಳುಗಾರಿಕೆ ನಡೆಸುವವರ ದೋಣಿ ಬಳಸಿ ಜನರನ್ನು ಎತ್ತರ ಪ್ರದೇಶಗಳಿಗೆ ಕರೆದುಕೊಂಡು ಬರಲಾಗಿದೆ. ಸ್ಥಳೀಯ ಗ್ರಾಮ ಪಂಚಾಯಿತಿ ಪಿಡಿಓ ಜನಪ್ರತಿನಿಧಿಗಳು ಸ್ಥಳಕ್ಕೆ ಭೇಟಿಕೊಟ್ಟು ಜನರಿಗೆ ಶಾಲೆ ದೇವಸ್ಥಾನಗಳಲ್ಲಿ ಉಳಿದುಕೊಳ್ಳುವ ವ್ಯವಸ್ಥೆ ಮಾಡಿದ್ದಾರೆ.

    ಕೇಂದ್ರ ವಿಪತ್ತು ನಿರ್ವಹಣಾ ತಂಡ ಬಂದಿದ್ದು, ಹತ್ತನೇ ಬಟಾಲಿಯನ್ ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳದ
    ಟೀಮ್ ಕಮಾಂಡರ್ ಗೋಪಾಲ್ ಮೀನಾ ನೇತೃತ್ವದಲ್ಲಿ ಕಾರ್ಯಾಚರಣೆ. ಹೆಚ್ಚಿನ ನೆರವಿಗಾಗಿ ಎರಡು ಹೆಲಿಕಾಪ್ಟರುಗಳನ್ನು ರವಾನಿಸಿರುವ ಕೇಂದ್ರ ಸರ್ಕಾರ.ಉಡುಪಿಯ ಹಲವಾರು ದ್ವೀಪಗಳಲ್ಲಿ ಸಿಕ್ಕಿ ಬಿದ್ದಿರುವ ಜನರ ರಕ್ಷಣೆಗೆ ಮುಂದಾಗಿರುವ ರಕ್ಷಣಾ ಸಿಬ್ಬಂದಿಗಳು

    ಉಡುಪಿ ತಾಲೂಕಲ್ಲಿ ಕಳೆದ 24 ತಾಸುಗಳಲ್ಲಿ 316 ಮಿಲಿ ಮೀಟರ್ ಮಳೆ ಬಿದ್ದಿದೆ. ಉಡುಪಿ ತಾಲೂಕು ಒಂದರಲ್ಲಿಯೇ ಇಷ್ಟು ಪ್ರಮಾಣದ ಮಳೆ ಸುರಿದಿದೆ. ಶನಿವಾರ ಮಧ್ಯಾಹ್ನದಿಂದ ಉಡುಪಿಯಲ್ಲಿ ಹನಿ ನಿಲ್ಲದೆ ಮಳೆಯಾಗಿದೆ. ನಿರಂಂತರವಾಗಿ ಸುರಿದ ಮಳೆಗೆ ಉಡುಪಿ ನಗರವೂ ಸೇರಿದಂತೆ, ಸುತ್ತಮುತ್ತಲ ಗ್ರಾಮಗಳಲ್ಲಿ ತೀವ್ರ ನೆರೆ ಏರಿದೆ.ಸ್ವರ್ಣಾ, ಸೀತಾ, ಮಡಿಸಾಲು, ಉದ್ಯಾವರ, ಶಾಂಭವಿ, ಪಾಪನಾಶಿನಿ, ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿವೆ. ನಗರದ ಮಧ್ಯಭಾಗದಲ್ಲಿ ಹರಿಯುವ ಇಂದ್ರಾಣಿ ನದಿಯೂ ಅಪಾಯದ ಮಟ್ಟವನ್ನು ಮೀರಿದೆ. ಉಡುಪಿ, ಕಾರ್ಕಳ ಭಾಗದಲ್ಲಿ ಮುಸಲಧಾರೆ ಮುಂದುವರಿದಿದೆ.

    ಭಾನುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡ 24 ತಾಸುಗಳಲ್ಲಿ ಉಡುಪಿ ಜಿಲ್ಲೆಯಲ್ಲಿ ಸರಾಸರಿ 197 ಮಿ.ಮೀ. ಮಳೆಯಾಗಿದೆ. ಉಡುಪಿ ತಾಲೂಕಿನಲ್ಲಿ ಅತ್ಯಧಿಕ 315.3 ಮಿ.ಮೀ. ಮಳೆ ದಾಖಲಾಗಿದೆ. ಮಲೆನಾಡಿನ ತಪ್ಪಲಿನಲ್ಲಿರುವ ಕಾರ್ಕಳ ತಾಲೂಕಿನಲ್ಲಿ 256.5 ಮಿ.ಮೀ. ಮಳೆ ಬಿದ್ದಿದೆ. ಕಳೆದ ಮೂರು ನಾಲ್ಕು ದಿನಗಳಿಂದ ಹೆಚ್ಚು ಮಳೆಯಾಗುತ್ತಿದ್ದ ಕುಂದಾಪುರ ತಾಲೂಕಿನಲ್ಲಿ ಕನಿಷ್ಠ 54.5 ಮಿ.ಮೀ. ಮಳೆ ಸುರಿದಿದೆ. ಜಿಲ್ಲೆಯ ಪ್ರತ್ಯೇಕ ಸ್ಥಳಗಳಲ್ಲಿ ಬಿದ್ದ ಮಳೆ ಪ್ರಮಾಣದ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿದೆ.

    Video:

    Share Information
    Advertisement
    Click to comment

    You must be logged in to post a comment Login

    Leave a Reply