DAKSHINA KANNADA
ಬಿಜೆಪಿ ಕಾರ್ಯಕರ್ತರಿಗೆ ಚಿತ್ರಹಿಂಸೆ: ತಪ್ಪಿತಸ್ಥ ಪೊಲೀಸರ ವಿರುದ್ಧ ಕ್ರಮಕ್ಕೆ ನಳಿನ್ ಒತ್ತಾಯ

ಮಂಗಳೂರು, ಮೇ 18: ಪುತ್ತೂರಿನಲ್ಲಿ ಬಿಜೆಪಿ ನಾಯಕರ ಬ್ಯಾನರ್ ಅಳವಡಿಸಿ ಚಪ್ಪಲಿ ಹಾರ ಹಾಕಿದ ಆರೋಪದ ಮೇಲೆ ಬಂಧಿತರಾದವರಿಗೆ ಚಿತ್ರಹಿಂಸೆ ನೀಡಿದ ಪ್ರಕರಣವನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತೀವ್ರವಾಗಿ ಖಂಡಿಸಿದ್ದಾರೆ. ಜೊತೆಗೆ ತಪ್ಪಿತಸ್ಥ ಅಧಿಕಾರಿಗಳ ಬಗ್ಗೆ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ನಳಿನ್ ಕುಮಾರ್ ಕಟೀಲ್, ಹಿಂದೂ ಯುವಕರ ಮೇಲೆ ಪುತ್ತೂರಿನಲ್ಲಿ ದಾಖಲಾದ ಪ್ರಕರಣದಲ್ಲಿ ಪೊಲೀಸರ ವರ್ತನೆ ಪೊಲೀಸ್ ಇಲಾಖೆಗೆ ಕಪ್ಪುಚುಕ್ಕೆ.

ಹಿಂದೂ ಯುವಕರ ಮೇಲೆ ಪುತ್ತೂರಿನಲ್ಲಿ ದಾಖಲಾದ ಪ್ರಕರಣದಲ್ಲಿ ಪೊಲೀಸರ ವರ್ತನೆ ಪೊಲೀಸ್ ಇಲಾಖೆಗೆ ಕಪ್ಪುಚುಕ್ಕೆ.
ದೂರಿನ ಬಗ್ಗೆ ಪರಿಶೀಲಿಸಿ ಯಥೋಚಿತ ತನಿಖೆ ನಡೆಸುವ ಬದಲು ಚಿತ್ರಹಿಂಸೆ ನೀಡಿರುವುದನ್ನು ಖಂಡಿಸುತ್ತೇನೆ.
ಉನ್ನತ ಪೊಲೀಸ್ ಅಧಿಕಾರಿಗಳು ತಪ್ಪಿತಸ್ಥ ಅಧಿಕಾರಿಗಳ ಬಗ್ಗೆ ಸೂಕ್ತ ಕ್ರಮಕೈಗೊಳ್ಳಬೇಕು.
— Nalinkumar Kateel (@nalinkateel) May 17, 2023
ದೂರಿನ ಬಗ್ಗೆ ಪರಿಶೀಲಿಸಿ ಯಥೋಚಿತ ತನಿಖೆ ನಡೆಸುವ ಬದಲು ಚಿತ್ರಹಿಂಸೆ ನೀಡಿರುವುದನ್ನು ಖಂಡಿಸುತ್ತೇನೆ. ಉನ್ನತ ಪೊಲೀಸ್ ಅಧಿಕಾರಿಗಳು ತಪ್ಪಿತಸ್ಥ ಅಧಿಕಾರಿಗಳ ಬಗ್ಗೆ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.