Connect with us

    LATEST NEWS

    ನಾಳೆ ಮಾರ್ಚ್ 28 ದಕ್ಷಿಣಕನ್ನಡ ಜಿಲ್ಲೆ ಸಂಪೂರ್ಣ ಬಂದ್

    ನಾಳೆ ಮಾರ್ಚ್ 28 ದಕ್ಷಿಣಕನ್ನಡ ಜಿಲ್ಲೆ ಸಂಪೂರ್ಣ ಬಂದ್

    ಮಂಗಳೂರು ಮಾರ್ಚ್ 27: ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ ಜಿಲ್ಲಾಡಳಿತ ನಾಳೆ ಮಾರ್ಚ್ 28ರಂದು ಇಡೀ ದಕ್ಷಿಣ ಕನ್ನಡ ಜಿಲ್ಲೆಯನ್ನು ಬಂದ್ ಮಾಡಲು ನಿರ್ಧರಿಸಿದೆ. ಈ ಹಿನ್ನಲೆ ನಾಳೆ ಎಲ್ಲಾ ವಾಣಿಜ್ಯ ವ್ಯವಹಾರಗಳನ್ನು ಸಂಪೂರ್ಣ ಸ್ಥಗಿತಗೊಳಿಸಲಾಗುವುದು.

    ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ 7 ಪ್ರಕರಣಗಳು ವರದಿಯಾಗಿವೆ. ನೆರೆಯ ಕಾಸರಗೋಡು, ಉತ್ತರ ಕನ್ನಡ ಜಿಲ್ಲೆಗಳಲ್ಲೂ ಕರೋನಾ ಪಾಸಿಟಿವ್ ಪ್ರಕರಣಗಳು ತೀವ್ರ ಏರಿಕೆಯಾಗುತ್ತಿವೆ. ಜಿಲ್ಲೆಯಲ್ಲಿ ಸಾರ್ವಜನಿಕ ಓಡಾಟ ನಿರ್ಬಂಧಿಸದಿದ್ದರೆ, ಮುಂದಿನ ದಿನಗಳು ಇನ್ನಷ್ಟು ಅಪಾಯಕಾರಿಯಾಗಲಿದೆ ಎಂಬ ಅತಂಕ ವ್ಯಕ್ತಪಡಿಸಿದರು.

    ಜನರ ಉತ್ತಮ ಭವಿಷ್ಯಕ್ಕಾಗಿ ಕೈಗೊಳ್ಳುವ ಈ ನಿರ್ಧಾರವನ್ನು ಎಲ್ಲರೂ ಬೆಂಬಲಿಸಿ ಖಡ್ಡಾಯವಾಗಿ ಪಾಲಿಸಬೇಕು. ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಧೃಡ ನಿರ್ಧಾರ ತೆಗೆದುಕೊಳ್ಳಬೇಕಿದೆ. ಪ್ರತಿಯೊಬ್ಬರೂ ಮನೆಯೊಳಗೆ ಕೂತು, ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಪ್ರಧಾನಮಂತ್ರಿ, ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ.

    ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ ಎಲ್ಲಾ ಚಟುವಟಿಕೆ, ವಾಣಿಜ್ಯ ವ್ಯವಹಾರಗಳನ್ನು, ಅಂಗಡಿ ಮುಂಗಟ್ಟುಗಳನ್ನು ಸಂಪೂರ್ಣವಾಗಿ ಬಂದ್ ಮಾಡಲಾಗುವುದು ಎಂದು ಸಭೆಯಲ್ಲಿ ತೀರ್ಮಾನ ಮಾಡಲಾಯಿತು.

    Share Information
    Advertisement
    Click to comment

    You must be logged in to post a comment Login

    Leave a Reply