Connect with us

    LATEST NEWS

    ಮಲ್ಪೆ ಬೀಚ್ ನಲ್ಲಿ ಪ್ರವಾಸಿಗರ ಮೇಲೆ ಟೂರಿಸ್ಟ್ ಬೋಟ್ ಸಿಬ್ಬಂದಿಯಿಂದ ಹಲ್ಲೆ

    ಉಡುಪಿ ಡಿಸೆಂಬರ್ 14: ಮಲ್ಪೆ ಬೀಚ್ ನಲ್ಲಿ ಪ್ರವಾಸಿಗರ ಮೇಲೆ ಟೂರಿಸ್ಟ್ ಬೋಟ್ ಸಿಬ್ಬಂದಿಗಳು ಹಲ್ಲೆ ನಡೆಸಿದ ಘಟನೆ ನಡೆದಿದ್ದು, ಇದೀಗ ಘಟನೆಯ ಸಿಸಿಟಿವಿ ವಿಡಿಯೋ ವೈರಲ್ ಆಗಿದೆ.


    ನಿನ್ನೆ ಸಂಜೆ ಮಲ್ಲೆ ಬೀಚ್ ನಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದ್ದು, ಸದ್ಯ ಘಟನೆಯ ಸಿಸಿಟಿವಿ ವಿಡಿಯೋ ವೈರಲ್ ಆಗಿದೆ. ವಿಡಿಯೋದಲ್ಲಿ ಪ್ರವಾಸಿಗರನ್ನು ಬೋಟ್ ಸಿಬ್ಬಂದಿ ಪ್ರವಾಸಿಗರ ತಂಡವೊಂದನ್ನು ಅಟ್ಟಾಡಿಸಿ ಹಲ್ಲೆ ನಡೆಸಿದೆ. ಹಲ್ಲೆಕೋರರಿಂದ ತಪ್ಪಿಸಿಕೊಳ್ಳಲು ಪ್ರವಾರಿಗರು ಹರಸಾಹಸಪಟ್ಟಿದ್ದಾರೆ. ಘಟನೆ ದೃಶ್ಯ ಬೀಚ್​ ಬಳಿ ಅಳವಡಿಸಿರುವ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಗಲಾಟೆ ಯಾಕಾಗಿ ನಡೆದಿದೆ ಎಂಬ ಬಗ್ಗೆ ಮಾಹಿತಿ ಇನ್ನೂ ಲಭ್ಯವಾಗಿಲ್ಲ.

    Share Information
    Advertisement
    Click to comment

    Leave a Reply

    Your email address will not be published. Required fields are marked *