Connect with us

    LATEST NEWS

    ಟೂರಿಸ್ಟ್ ಟೆಂಪೋ ಕಂದಕಕ್ಕೆ ಬಿದ್ದು 7 ವಿದ್ಯಾರ್ಥಿಗಳ ದುರ್ಮರಣ

    ಶಿಮ್ಲಾ, ಸೆಪ್ಟೆಂಬರ್ 27: ಹಿಮಾಚಲ ಪ್ರದೇಶದಲ್ಲಿ ಭಾನುವಾರ ರಾತ್ರಿ ಭೀಕರ ಅಪಘಾತವೊಂದು ಸಂಭವಿಸಿದೆ. ಟೂರಿಸ್ಟ್ ಟೆಂಪೋ ಟ್ರಾವೆಲರ್  ಒಂದು ಕಂದಕಕ್ಕೆ ಬಿದ್ದು, 7 ಮಂದಿ ಸಾವನ್ನಪ್ಪಿದ್ದಾರೆ ಹಾಗೂ 10 ಜನರು ಗಾಯಗೊಂಡಿದ್ದಾರೆ.

    ಘಟನೆ ಹಿಮಾಚಲ ಪ್ರದೇಶದ ಕುಲುವಿನ ಜಲೋಡಿ ಪಾಸ್ ಬಳಿ ನಡೆದಿದೆ. ವಾಹನದಲ್ಲಿ 17 ಜನರು ಪ್ರಯಾಣಿಸುತ್ತಿದ್ದು, ರಾತ್ರಿ 8:30ರ ಸುಮಾರಿಗೆ ದುರ್ಘಟನೆ ನಡೆದಿದೆ. ಘಟನೆಯ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ ಬಳಿಕ ಮಧ್ಯರಾತ್ರಿ ಸುಮಾರು 1:37ರ ಹೊತ್ತಿಗೆ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ.

    ವರದಿಗಳ ಪ್ರಕಾರ ಟೂರಿಸ್ಟ್ ವಾಹನದಲ್ಲಿದ್ದವರು ವಾರಣಾಸಿಯ ವಿದ್ಯಾರ್ಥಿಗಳಾಗಿದ್ದು, ಶೈಕ್ಷಣಿಕ ಪ್ರವಾಸಕ್ಕೆ ಹೋಗುತ್ತಿದ್ದರು ಎನ್ನಲಾಗಿದೆ. ಎಲ್ಲಾ ಗಾಯಾಳುಗಳಿಗೆ ಕುಲುವಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

    Share Information
    Advertisement
    Click to comment

    You must be logged in to post a comment Login

    Leave a Reply