FILM
‘ಟಾಕ್ಸಿಕ್’ ಪಯಣ ಶುರು; ಬಿಗ್ ಅಪ್ಡೇಟ್ ನೀಡಿದ ಯಶ್
ಬೆಂಗಳೂರು, ಆಗಸ್ಟ್ 08: ಬಾಕ್ಸ್ಆಫೀಸ್ನಲ್ಲಿ ಧೂಳೆಬ್ಬಿಸಿದ್ದ ಕೆಜಿಎಫ್ ಸರಣಿ ಬಳಿಕ ನಟ ಯಶ್ ಮಲಯಾಳಂ ನಿರ್ದೇಶಕಿ ಗೀತು ಮೋಹನ್ ದಾಸ್ ನಿರ್ದೇಶನ ಟಾಕ್ಸಿಕ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.
ಈ ಸಿನಿಮಾ ಇಂದು (ಆಗಸ್ಟ್ 08) ಅಧಿಕೃತವಾಗಿ ಸೆಟ್ಟೇರಿದೆ. ಬೆಂಗಳೂರು ನಗರದ HMT ಫ್ಯಾಕ್ಟರಿಯಲ್ಲಿ ಹಾಕಲಾಗಿರುವ ಬೃಹತ್ ಸೆಟ್ನಲ್ಲಿ ಚಿತ್ರತಂಡ ಬ್ರಾಹ್ಮೀ ಮುಹೂರ್ತದಲ್ಲಿ ಪೂಜಾ ಕಾರ್ಯಗಳನ್ನು ನೆರವೇರಿಸಿದ್ದು, ಇಂದಿನಿಂದಲೇ ಶೂಟಿಂಗ್ ಆರಂಭವಾಗಲಿದೆ ಎಂದು ತಿಳಿಸಿದೆ.
ಟಾಕ್ಸಿಕ್ ಸಿನಿಮಾದ ಕುರಿತು ನಟ ರಾಕಿಂಗ್ ಸ್ಟಾರ್ ಯಶ್ ಮಾಹಿತಿ ಹಂಚಿಕೊಂಡಿದ್ದು, ಬೆಳ್ಳಂಬೆಳಿಗ್ಗೆಯೇ ಸಿನಿ ರಸಿಕರಿಗೆ ಬಿಗ್ ಅಪ್ಡೇಟ್ ನೀಡಿದ್ದಾರೆ. ಪಯಣ ಶುರುವಾಗಿದೆ (The journey begins #Toxic) ಎಂದು ಬರೆದುಕೊಳ್ಳುವ ಮೂಲಕ ಸಿನಿಮಾದ ಶೂಟಿಂಗ್ ಇಂದಿನಿಂದಲೇ ಆರಂಭವಾಗುತ್ತದೆ ಎಂದು ತಿಳಿಸಿದ್ದಾರೆ. ಈ ಸುದ್ದಿ ಕೇಳಿ ಅಭಿಮಾನಿಗಳು ಥ್ರಿಲ್ ಆಗಿದ್ದು, ಮುಂದಿನ ಅಪ್ಡೇಟ್ಗಾಗಿ ಕಾತುರದಿಂದ ಕಾಯುತ್ತಿದ್ದಾರೆ.
The journey begins 🎬 #Toxic pic.twitter.com/Ysqmr4xrpg
— Yash (@TheNameIsYash) August 8, 2024
ಟಾಕ್ಸಿಕ್ ಚಿತ್ರದ ಕೆಲಸಗಳು ಅಧಿಕೃತವಾಗಿ ಆರಂಭವಾಗುವುದಕ್ಕೂ ಮುನ್ನ ನಟ ಯಶ್ ಕುಟುಂಬ ಸಮೇತರಾಗಿ ಧರ್ಮಸ್ಥಳ, ಸುರ್ಯದಲ್ಲಿರುವ ಸದಾಶಿವರುದ್ರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದರು. ಇದರ ಬೆನ್ನಲ್ಲೇ ಟಾಕ್ಸಿಕ್ ಸಿನಿಮಾದ ಶೂಟಿಂಗ್ ಆರಂಭಗೊಂಡಿದ್ದು, ಬೆಂಗಳೂರಿನ ಹೊರವಲಯದಲ್ಲಿರುವ HMT ಫ್ಯಾಕ್ಟರಿಯಲ್ಲಿ ಇದಕ್ಕಾಗಿ ಬೃಹತ್ ಸೆಟ್ ಹಾಕಲಾಗಿದೆ.
You must be logged in to post a comment Login