LATEST NEWS
ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ಇಂದು ರೈತರಿಂದ ಟ್ರ್ಯಾಕ್ಟರ್ ಪರೇಡ್
ನವದೆಹಲಿ, ಜನವರಿ 26 : ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳ ವಿರುದ್ಧ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು ಗಣರಾಜ್ಯೋತ್ಸವದ ದಿನವಾದ ಇಂದು ಕೇಂದ್ರ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಟ್ರ್ಯಾಕ್ಟರ್ ರ್ಯಾಲಿ ನಡೆಸುತ್ತಿದ್ದಾರೆ.
ಈಗಾಗಲೇ 2 ಲಕ್ಷಕ್ಕೂ ಹೆಚ್ಚು ಟ್ರ್ಯಾಕ್ಟರ್ ಗಳು ದೆಹಲಿಯ ಗಡಿ ತಲುಪಿದ್ದು, 250 ಕಿ.ಮೀ ಗೂ ಹೆಚ್ಚು ದೂರ ರೈತರು ಪ್ರತಿಭಟನೆ ನಡೆಸಲಿದ್ದಾರೆ. ಇದಕ್ಕಾಗಿ ಎಲ್ಲ ಸಿದ್ಧತೆಗಳು ಪೂರ್ಣಗೊಂಡಿದ್ದು, ದೆಹಲಿಯ ರಾಜಪಥದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ ಮುಗಿಯುತ್ತಿದ್ದಂತೆ ಟ್ರ್ಯಾಕ್ಟರ್ ಪರೇಡ್ ಆರಂಭವಾಗಲಿದೆ.
ಇಂದು ಗಣರಾಜ್ಯೋತ್ಸವ ಪರೇಡ್ ಮುಗಿದ ಕೆಲವೇ ಕ್ಷಣಗಳಲ್ಲಿ ರೈತರ ಟ್ರ್ಯಾಕ್ಟರ್ ಪರೇಡ್ ಆರಂಭವಾಗಲಿದೆ. ದೆಹಲಿಯ ಹೊರವಲಯದಲ್ಲಿ 2 ಲಕ್ಷಕ್ಕೂ ಅಧಿಕ ಟ್ರ್ಯಾಕ್ಟರ್ ಬಂದು ಸೇರಿದ್ದು, ಪಂಜಾಬ್, ಹರಿಯಾಣ, ರಾಜಸ್ಥಾನ, ಉತ್ತರ ಪ್ರದೇಶದಿಂದ ಲಕ್ಷಾಂತರ ಟ್ರ್ಯಾಕ್ಟರ್ ಗಳು ದೆಹಲಿ ಗಡಿಯಲ್ಲಿ ಜಮಾವಣೆಯಾಗಿವೆ.