Connect with us

LATEST NEWS

ರೈಲು ಹಳಿ ದಾಟುವಾಗ ಡಿಕ್ಕಿ ಹೊಡೆದ ಟ್ರೈನ್ – ಐವರು ಸಾವು

ಅಮರಾವತಿ: ರೈಲು ಹಳಿ ದಾಟುತ್ತಿದ್ದ ಸಂದರ್ಭ ಎಕ್ಸ್ ಪ್ರೆಸ್ ರೈಲು ಡಿಕ್ಕಿ ಹೊಡೆದ ಪರಿಣಾಮ ಐವರು ಧಾರುಣವಾಗಿ ಸಾವನಪ್ಪಿರುವ ಘಟನೆ ಆಂಧ್ರ ಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಬಟುವಾ ಗ್ರಾಮದ ಬಳಿ ನಡೆದಿದೆ.


ಕೊಯಮತ್ತೂರು- ಸಿಲ್ಚಾರ್ ಎಕ್ಸ್‍ಪ್ರೆಸ್ ರೈಲಿನಿಂದ ಸಿಗಡಮ್ -ಚಿಪುರುಪಲ್ಲಿ ನಿಲ್ದಾಣಗಳ ನಡುವೆ ಇಳಿದು ಪಕ್ಕದ ಹಳಿಯತ್ತ ಪ್ರಯಾಣಿಕರು ಓಡಲು ಪ್ರಯತ್ನಿಸುತ್ತಿದ್ದರು. ಈ ವೇಳೆ ಅದೇ ಹಳಿಯಲ್ಲಿ ವೇಗವಾಗಿ ಬಂದ ಭುವನೇಶ್ವರ-ಮುಂಬೈ ಕೊನಾರ್ಕ್ ರೈಲು, ಹಳಿಯ ಮೇಲಿದ್ದ ಪ್ರಯಾಣಿಕರ ಮೇಲೆ ಹರಿದಿದೆ. ಪರಿಣಾಮ 5 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಐವರ ಮೃತದೇಹಗಳ ಗುರುತು ಪತ್ತೆ ಮಾಡಲಾಗಿದೆ. ರೈಲ್ವೇ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement
Click to comment

You must be logged in to post a comment Login

Leave a Reply