Connect with us

    LATEST NEWS

    ಟ್ರೈನ್ ಡಿಕ್ಕಿಗೆ ತಾಯಿ ಜೊತೆ ಪ್ರಾಣ ಬಿಟ್ಟ ಎರಡು ಮರಿ ಆನೆಗಳು…!!

    ಕೊಯಂಬತ್ತೂರು: ಎರಡು ಪುಟ್ಟ ಮರಿ ಆನೆಯ ಜೊತೆ ತಾಯಿ ಆನೆಯೂ ರೈಲು ಡಿಕ್ಕಿ ಹೊಡೆದು ಧಾರುಣವಾಗಿ ಸಾವನಪ್ಪಿರುವ ಘಟನೆ ಶುಕ್ರವಾರ ರಾತ್ರಿ ತಮಿಳುನಾಡು-ಕೇರಳದ ಗಡಿಯಾದ ನವಕ್ಕರೈ ಸಮೀಪದ ಮಾವುತ್ತಂಪತ್ತಿ ಗ್ರಾಮದ ಬಳಿ ನಡೆದಿದೆ.


    25 ವರ್ಷದ ಹೆಣ್ಣಾನೆ ಹಾಗೂ ಅದರ 12 ವರ್ಷದ ಎರಡು ಮರಿಗಳು ರೈಲು ಹಳಿ ದಾಟುತ್ತಿದ್ದಾಗ ಮಂಗಳೂರು–ಚೆನ್ನೈ ಎಕ್ಸಪ್ರೆಸ್‌ ರೈಲು ಡಿಕ್ಕಿಯಾಗಿ ಸಾವನಪ್ಪಿದೆ.
    ಮಡುಕ್ಕುರೈ ಬಳಿ ರಾತ್ರಿ 9 ರ ಸಮಯದಲ್ಲಿ ಈ ದುರ್ಘಟನೆ ನಡೆದಿದೆ. ಘಟನೆ ಸಂಭವಿಸಿದಾಗ ರೈಲು ಅತಿ ವೇಗವಾಗಿ ಚಲಿಸುತ್ತಿತ್ತು, ಡಿಕ್ಕಿ ರಭಸಕ್ಕೆ ಆನೆಗಳು ಸ್ಥಳದಲ್ಲೇ ಮೃತಪಟ್ಟಿವೆ. ಸ್ಥಳಕ್ಕೆ ಕಾರ್ಯಾಚರಣೆ ತಂಡ ತೆರಳಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

    ಆನೆಗಳು ಮೃತಪಟ್ಟ ಸುದ್ದಿ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ಮಾಡಿದ್ದಾರೆ. ರಾತ್ರಿ ಕತ್ತಲಿದ್ದರೂ ಆನೆಯ ಮೃತದೇಹಗಳನ್ನು ಹಳಿಯ ಮೇಲಿಂದ ತೆಗೆಯಲಾಗಿದ್ದು, ಇಂದು ಪೋಸ್ಟ್​ಮಾರ್ಟಮ್​ ಮಾಡಲಾಗುವುದು ಎಂದು ಅರಣ್ಯ ಇಲಾಖೆ ಮಾಹಿತಿ ನೀಡಿದೆ.

    Share Information
    Advertisement
    Click to comment

    You must be logged in to post a comment Login

    Leave a Reply